Accident | ಆಂಧ್ರದಲ್ಲಿ ಕಾರು ಅಪಘಾತ, ರಾಜ್ಯದ ಮೂವರು ಯುವಕರ ಸಾವು
ಕರ್ನೂಲು ಬಳಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದ್ದು ತೀವುವಾಗಿ ಗಾಯಗೊಂಡಿದ್ದ ನವೀನ್, ಸಂತೋಷ್ ಹಾಗೂ ಲೋಕೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದು ಉಳಿದವರಿಗೆ ಗಾಯಗಳಾಗಿವೆ.;
By : The Federal
Update: 2025-05-19 09:20 GMT
ಸಾಂದರ್ಭಿಕ ಚಿತ್ರ
ಹುಟ್ಟು ಹಬ್ಬದ ಆಚರಣೆಗಾಗಿ ಆಂಧ್ರಪ್ರದೇಶ ಪ್ರವಾಸಕ್ಕೆ ತೆರಳಿದ್ದ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಮೂವರು ಯುವಕರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಮೂವರೂ ಮೃತಪಟ್ಟಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲಾ ಬಿಜೆಪಿ ಘಟಕದ ಕಾರ್ಯದರ್ಶಿ ಸಂತೋಷ್ ಹುಟ್ಟುಹಬ್ಬದ ಪ್ರಯುಕ್ತ ಆರು ಜನ ಸ್ನೇಹಿತರ ತಂಡ ಕಾರಿನಲ್ಲಿ ಮಂತ್ರಾಲಯದ ದರ್ಶನ ಮುಗಿಸಿ ನಂತರ ಶ್ರೀಶೈಲಕ್ಕೆ ಹೊರಟ್ಟಿದ್ದರು. ಕರ್ನೂಲು ಬಳಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದ್ದು ತೀವ್ರ ಗಾಯಗೊಂಡಿದ್ದ ನವೀನ್, ಸಂತೋಷ್ ಹಾಗೂ ಲೋಕೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಳಿದವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕನಾಯಕನಹಳ್ಳಿ ಬಿಜೆಪಿ ಮುಖಂಡರಾಗಿದ್ದ ಕೆಂಕೆರೆ ಗ್ರಾಮದ ನವೀನ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರೂ ಆಗಿದ್ದರು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.