‌ಪ್ರವಾಸಿಗರೇ ಗಮನಿಸಿ | ಜನವರಿಯಿಂದ ಎರಡೂವರೆ ತಿಂಗಳು ಜೋಗ ಬಂದ್

ಜನವರಿ 1 ರಿಂದ ಮಾರ್ಚ್ 15ರ ವರೆಗೆ ಎರಡೂವರೆ ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Update: 2024-12-16 10:36 GMT
ಜೋಗ ಜಲಪಾತ
Click the Play button to listen to article

ಜನವರಿಯಿಂದ ಮಾರ್ಚ್‌ ಮಧ್ಯಂತರದವರೆಗೆ ನೀವೇನಾದರೂ ಮಲೆನಾಡು ಕಡೆ ಟ್ರಿಪ್‌ ಪ್ಲಾನ್‌ ಮಾಡಿದ್ದರೆ, ಈ ಸುದ್ದಿಯನ್ನು ಓದಲೇಬೇಕು. ಮಲೆನಾಡು ಪ್ರವಾಸವೆಂದರೆ ಸಹಜವಾಗೇ ನಿಮ್ಮ ಲಿಸ್ಟಲ್ಲಿ ಜೋಗ ಜಲಪಾತ ವೀಕ್ಷಣೆಯೂ ಇದ್ದೇ ಇರುತ್ತದೆ. ಹಾಗಿದ್ದರೆ, ನಿಮ್ಮ ಉತ್ಸಾಹಕ್ಕೆ ನೀರೆರಚುವ ಸಂಗತಿಯನ್ನು ಇದೀಗ ಶಿವಮೊಗ್ಗ ಜಿಲ್ಲಾಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ವಿಶ್ವವಿಖ್ಯಾತ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರ ಮೂಲಸೌಕರ್ಯ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಜನವರಿ 1 ರಿಂದ ಮಾರ್ಚ್ 15ರ ವರೆಗೆ ಎರಡೂವರೆ ತಿಂಗಳ ಕಾಲ ಜೋಗ ಜಲಪಾತಕ್ಕೆ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜನವರಿ 1 ರಿಂದ ಮಾರ್ಚ್ 15ರ ವರೆಗೆ ಎರಡೂವರೆ ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

ಜೋಗ ಮುಖ್ಯದ್ವಾರ ಮತ್ತು ಇತರ ಮೂಲ ಸೌಕರ್ಯವನ್ನು ಕಲ್ಪಿಸುವ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರವಾಸಿಗರು ಆಗಮಿಸಿದರೆ ಅವರಿಗೆ ಅಡಚಣೆ ಉಂಟಾಗಲಿದೆ. ಆದ್ದರಿಂದ ಭೇಟಿಗೆ ನಿರ್ಬಂಧ ಹೇರಲಾಗಿದೆ. ಹೆಚ್ಚಿನ ಮಾಹಿತಿಗೆ 08182-251444 ಸಂಖ್ಯೆಗೆ ಕರೆ ಮಾಡಬಹುದು.

ಸುಮಾರು 185 ಕೋಟಿ ರೂ.ಗಳಲ್ಲಿ ಜೋಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದ್ದು, ಜಲಪಾತ ವೀಕ್ಷಣಾ ಗೋಪುರ, ರೋಪ್ ವೇ, ರೈನ್ ಡ್ಯಾನ್ಸ್, ಗಾರ್ಡನ್, ವಾಣಿಜ್ಯ ಮಳಿಗೆಗಳು, ಉದ್ಯಾನವನ, ಪ್ರವಾಸಿ ಲಾಡ್ಜ್ ಕಾಮಗಾರಿ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ.

Tags:    

Similar News