ಅಥಣಿಯಲ್ಲಿ ಭೀಕರ ಅಪಘಾತ; ಕಾರು-ಬಸ್ ಡಿಕ್ಕಿ, ಮೂವರ ದುರ್ಮರಣ
ಕೊಲ್ಹಾಪುರದ ಮಹಾಲಕ್ಷ್ಮಿ ದೇವಿ ದರ್ಶನ ಪಡೆದು ಕಾರಿನಲ್ಲಿ ವಾಪಸ್ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.;
By : The Federal
Update: 2025-07-06 12:38 GMT
ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಲ್ಲದೆ, ಒಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಈ ದುರಂತವು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಬಳಿ ಸಂಭವಿಸಿದೆ.
ಮೃತಪಟ್ಟವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ನಿವಾಸಿಗಳೆಂದು ತಿಳಿದುಬಂದಿದೆ. ಮೃತರನ್ನು ಗಿರೀಶ ಬಳ್ಳೋರಗಿ, ರಾಹುಲ್ ಮ್ಯಾಲೇಶಿ ಮತ್ತು ಸಂಗು ಅಮರಗೊಂಡ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ರಾಧಿಕಾ ಮ್ಯಾಲೇಶಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲ್ಹಾಪುರದ ಮಹಾಲಕ್ಷ್ಮಿ ದೇವಿ ದರ್ಶನ ಪಡೆದು ಕಾರಿನಲ್ಲಿ ವಾಪಸ್ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.