ಪಾವಗಡದಲ್ಲಿ ಆಂಧ್ರ ಬಸ್-ಇನ್ನೋವಾ ಕಾರು ಮುಖಾಮುಖಿ; ಕಾರು ಚಾಲಕ ಸ್ಥಳದಲ್ಲೇ ಸಾವು

ಮೃತರನ್ನು ಪಾವಗಡದ ನಿವಾಸಿ ಚಂದ್ರಶೇಖರ್‌ (38) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಆಂಧ್ರ ಸಾರಿಗೆ ಬಸ್‌, ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಚಾಲಕ ಒಳಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ.

Update: 2025-12-20 08:05 GMT

ಸಾಂದರ್ಭಿಕ ಚಿತ್ರ

Click the Play button to listen to article

ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇನ್ನೋವಾ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ಬೆಳಿಗ್ಗೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಮಲಕುಂಟೆ ಗ್ರಾಮದ ಬಳಿ ನಡೆದಿದೆ. 

ಮೃತರನ್ನು ಪಾವಗಡದ ನಿವಾಸಿ ಚಂದ್ರಶೇಖರ್‌ (38) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಆಂಧ್ರ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ವೇಳೆ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ರಸ್ತೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಿನ ಸಮಯದಲ್ಲಿ ದಟ್ಟ ಮಂಜು ಆವರಿಸಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

Tags:    

Similar News