IAS Transfer | ಐಎಎಸ್ ಅಧಿಕಾರಿಗಳ ವರ್ಗಾವಣೆ

ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸಿನ್‌ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ವರ್ಗಾಯಿಸಿದೆ.;

Update: 2024-10-11 07:53 GMT
ವರ್ಗಾವಣೆ

ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಮೊಹಮ್ಮದ್ ಮೊನ್ ಅವರನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ. 

ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸಿನ್‌ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ.

ಐಎಎಸ್ ಅಧಿಕಾರಿಗಳಾದ ಎನ್.ವಿ.ಪ್ರಸಾದ್ ಅವರನ್ನು ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಎನ್‌.ಮಂಜುಶ್ರೀ ಅವರನ್ನು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಆಯುಕ್ತರಾಗಿದ್ದ ಬಿ.ಬಿ.ಕಾವೇರಿ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ನಿಯೋಜಿಸಲಾಗಿತ್ತು. ಅದೇ ರೀತಿ ಮುಖ್ಯಮಂತ್ರಿಗಳ ಕಾರ್ಯದರ್ಶಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಯಾಗಿದ್ದ ಕೆ.ವಿ.ತ್ರಿಲೋಕ ಚಂದ್ರ ಅವರನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಆಯುಕ್ತರನ್ನು ವರ್ಗಾಯಿಸಲಾಗಿತ್ತು.

Tags:    

Similar News