ಸಾರಿಗೆ ಮುಷ್ಕರ: ಕೊಪ್ಪಳ, ತುಮಕೂರು ವಿವಿ ಪರೀಕ್ಷೆ ಮುಂದೂಡಿಕೆ

ತುಮಕೂರು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆಯಬೇಕಾಗಿದ್ದ ಎಲ್ಲ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.;

Update: 2025-08-05 08:53 GMT

ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಮಂಗಳವಾರ ಕೊಪ್ಪಳ ಹಾಗೂ ತುಮಕೂರು ವಿಶ್ವವಿದ್ಯಾಲಯದಲ್ಲಿ ನಡೆಯಬೇಕಾಗಿದ್ದ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ. 

ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಬರಲು ಅನಾನುಕೂಲವಾದ ಕಾರಣ ಕೊಪ್ಪಳ ವಿಶ್ವವಿದ್ಯಾಲಯದಿಂದ ಪರೀಕ್ಷೆ ಮುಂದೂಡಲಾಗಿದೆ. ನಿಗದಿಯಂತೆ ಪರೀಕ್ಷೆ ನಡೆಸಲು ವಿವಿ ಆಡಳಿತ ಮುಂದಾಗಿತ್ತು. ಆದರೆ, ಹಲವು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ತಲುಪಲು ಸಾಧ್ಯವಾಗದ ಪರಿಸ್ಥಿತಿ ಮನಗಂಡು ಪರೀಕ್ಷೆ ಮುಂದೂಡಲಾಗಿದೆ ಎಂದು ಕುಲಪತಿ ಪ್ರೊ.ಬಿ.ಕೆ.ರವಿ ತಿಳಿಸಿದ್ದಾರೆ‌.

ತುಮಕೂರು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆಯಬೇಕಾಗಿದ್ದ ಎಲ್ಲ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮರು ನಿಗದಿಯಾದ ದಿನಾಂಕಗಳನ್ನು ಮುಂದೆ ತಿಳಿಸಲಾಗುವುದು ಎಂದು ಕುಲಸಚಿವರು ತಿಳಿಸಿದ್ದಾರೆ.

Tags:    

Similar News