ಉಡುಪಿಯಲ್ಲಿ ಪಾಕಿಸ್ತಾನ ಪರ ಬೇಹುಗಾರಿಕೆ- ಆರೋಪಿಗಳಿಬ್ಬರು ಪೊಲೀಸ್‌ ಬಲೆಗೆ

ಭಾರತದ ನೌಕಾಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್ ಮೂಲಕ ಅನಧಿಕೃತವಾಗಿ ಶೇರ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

Update: 2025-12-22 02:30 GMT
ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡುತ್ತಿದ್ದ ಆರೋಪಿಗಳು
Click the Play button to listen to article

ಉಡುಪಿಯಲ್ಲಿ ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಭಾರತದ ನೌಕಾಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್ ಮೂಲಕ ಅನಧಿಕೃತವಾಗಿ ಶೇರ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಉತ್ತರ ಪ್ರದೇಶದ ರೋಹಿತ್ (29), ಸಂತ್ರಿ (37)ಯನ್ನು ಮಲ್ಪೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ರೋಹಿತ್ ಕೇರಳದ ಕೊಚ್ಚಿಯಲ್ಲಿರುವ ಕೊಚ್ಚಿನ್ ಶಿಪ್‌ ಯಾರ್ಡ್ ಲಿಮಿಟೆಡ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಈತ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳನ್ನು ನಿರ್ಮಾಣ ಮಾಡುತ್ತಿದ್ದ. ಅಲ್ಲಿ ಭಾರತದ ನೌಕಾಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ಸಂಗ್ರಹಿಸಿ ಶೇರ್‌ ಮಾಡುತ್ತಿದ್ದ.

ಇದಾದ ಬಳಿಕ ಆತ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ ಬಂದಿದ್ದ. ಅಲ್ಲಿ ಬಂದ ನಂತರವೂ ಆತ ಕೊಚ್ಚಿಯಲ್ಲಿರುವ ಆತನ ಸ್ನೇಹಿತ ಸಂತ್ರಿಯಿಂದ ಮಾಹಿತಿ ಪಡೆಯುತ್ತಿದ್ದ. ಈ ಬಗ್ಗೆ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಸಿಇಓ ಮಲ್ಪೆ ಠಾಣೆಗೆ ದೂರು ನೀಡಿದ್ದರು. ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಆ ಬಳಿಕ ಪ್ರಕರಣದ ತನಿಖೆಯನ್ನು ಕೈಗೊಂಡ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಹರ್ಷ ಪ್ರಿಯಂವದಾ ಅವರ ನೇತೃತ್ವದ ಮಲ್ಪೆ ಪೊಲೀಸ್ ಉಪನಿರೀಕ್ಷಕ ಅನೀಲ್ ಕುಮಾರ್ ಡಿ, ಎಎಸ್‌ಐ ಹರೀಶ್, ಪಿಸಿ ರವಿ ಜಾಧವ್ ಮತ್ತು ತಂಡ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ಅವರಿಗೆ ಡಿ.7ವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

ಸಿಮ್ ಕಾರ್ಡ್ ನೀಡುತ್ತಿದ ಆರೋಪಿಯೂ ಪೊಲೀಸ್‌ ಬಲೆಗೆ

ಇನ್ನು ಈ ಆರೋಪಿಗಳಿಗೆ ಸಿಮ್‌ ಕಾರ್ಡ್‌ ನೀಡುತ್ತಿದ್ದ ಮತ್ತೊರ್ವ ಆರೋಪಿ ಕೂಡ ಪೊಲೀಸ್‌ ಬಲೆಗೆ ಬಿದ್ದಿದ್ದಾನೆ.  ಭಾರತೀಯ ನೌಕಾಪಡೆಯ ಸೂಕ್ಷ್ಮ ಮಾಹಿತಿಯನ್ನು ಅನಧಿಕೃತ ವಿದೇಶಿ ಸಂಸ್ಥೆಗಳಿಗೆ ಸೋರಿಕೆ ಮಾಡಿದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಗುಜರಾತ್ ಮೂಲದ 34 ವರ್ಷದ ವ್ಯಕ್ತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಉಪವಿಭಾಗದ ಹಿರಿಯ ಪೊಲೀಸ್ ಅಧಿಕಾರಿ ಹರ್ಷ ಪ್ರಿಯಂವದ ನೇತೃತ್ವದ ತನಿಖಾ ತಂಡ ಕುಮಾರ್‌ನನ್ನು ಪತ್ತೆಹಚ್ಚಿವೆ. ಪೊಲೀಸ್ ವರದಿಗಳ ಪ್ರಕಾರ, ಕುಮಾರ್ ತನ್ನ ಹೆಸರಿನಲ್ಲಿ ಸಿಮ್ ಕಾರ್ಡ್ ಖರೀದಿಸಿ ಹಣದ ಬದಲಾಗಿ ಪ್ರಮುಖ ಆರೋಪಿಗೆ ನೀಡಿದ್ದ ಎನ್ನಲಾಗಿದೆ.

ವಾಟ್ಸ್‌ಆ್ಯಪ್ ಮೂಲಕ ಪಾಕಿಸ್ತಾನಕ್ಕೆ ರವಾನಿಸಿ ಹಣ ಪಡೆಯುತ್ತಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದರು. ವಿಚಾರಣೆ ವೇಳೆ ಈ ಆರೋಪಿಗಳಿಗೆ ನೀಡಿದ ಮಾಹಿತಿಯಂತೆ ಅವರಿಗೆ ಸಿಮ್‌ಗಳನ್ನು ಒದಗಿಸುತಿದ್ದ ಹೀರೇಂದ್ರನನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ.

Tags:    

Similar News