Yettinahole Project | ಇಬ್ಬರು ಬಾಲಕರನ್ನು ಬಲಿತೆಗೆದುಕೊಂಡ ಎತ್ತಿನಹೊಳೆ ಕಾಮಗಾರಿ
ಎತ್ತಿನಹೊಳೆ ನಾಲೆಯ ಕಾಮಗಾರಿಗಾಗಿ ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಹುಚ್ಚನಹಟ್ಟಿ ಗ್ರಾಮದ ಸಮೀಪ ನಡೆದಿದೆ.;
ಎತ್ತಿನಹೊಳೆ ಯೋಜನೆ ಗುತ್ತಿಗೆದಾರರು ಮತ್ತು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತಿಪಟೂರು ತಾಲೂಕಿನ ಇಬ್ಬರು ಮಕ್ಕಳು ಬಲಿಯಾಗಿದ್ದಾರೆ.
ಎತ್ತಿನಹೊಳೆ ನಾಲೆಯ ಕಾಮಗಾರಿ ಬಳಿ ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ತಿಪಟೂರು ಜಿಲ್ಲೆಯ ಹುಚ್ಚನಹಟ್ಟಿ ಗ್ರಾಮದ ಸಮೀಪ ನಡೆದಿದೆ.
ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಹಾಗೂ ಮನೋಹರ್ (10) ಮೃತಪಟ್ಟವರು.
ಹುಚ್ಚನಹಟ್ಟಿ ಗ್ರಾಮದ ಬಳಿ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ಥಳಕ್ಕೆ ಹೋಗಿದ್ದ ಮಕ್ಕಳು ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರಬಹುದು ಎನ್ನಲಾಗಿದೆ.
ಗುರುವಾರ ಸಂಜೆ ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ ಮಕ್ಕಳು, ನಂತರ ಹೊರ ಹೋಗಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಆತಂಕಗೊಂಡ ಪೋಷಕರು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶುಕ್ರವಾರ ಬೆಳಿಗ್ಗೆ ಇಬ್ಬರು ಬಾಲಕರ ಶವ ಪತ್ತೆಯಾಗಿದೆ.
ಸ್ಥಳಕ್ಕೆ ತಿಪಟೂರು ಶಾಸಕ ಕೆ.ಷಡಕ್ಷರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಭೇಟಿ ನೀಡಿದ್ದರು.