ಜೀವ ಬೆದರಿಕೆ, ಜಾತಿ ನಿಂದನೆ | ಮುನಿರತ್ನ ವಿರುದ್ಧ ಎರಡು ಎಫ್ಐಆರ್

ಜೀವ ಬೆದರಿಕೆ ಹಾಕಿದ ಹಾಗೂ ಜಾತಿ ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಪ್ರತ್ಯೇಕ ಎರಡು ಪ್ರಕರಣದಲ್ಲಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ವೈಯ್ಯಾಲಿಕಾವಲ್‌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.;

Update: 2024-09-14 06:31 GMT
ಬಿಜೆಪಿ ಶಾಸಕ ಮುನಿರತ್ನ
Click the Play button to listen to article

ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಪ್ರತ್ಯೇಕ ಎರಡು ಪ್ರಕರಣದಲ್ಲಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ವೈಯ್ಯಾಲಿಕಾವಲ್‌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು 30 ರೂ ಲಕ್ಷಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾರೆ ಎಂದು ಶಾಸಕ ಮುನಿರತ್ನ ವಿರುದ್ಧ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜ್ ನೀಡಿದ ದೂರು ಆಧರಿಸಿ ಮುನಿರತ್ನ, ಸರ್ಕಾರಿ ಅಧಿಕಾರಿ ವಿಜಯ್‌ಕುಮಾ‌ರ್, ಆಪ್ತ ಕಾರ್ಯದರ್ಶಿ ಅಭಿಷೇಕ್ ಹಾಗೂ ಶಾಸಕರ ಆಪ್ತ ವಸಂತಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾತಿ ನಿಂದನೆ ಆರೋಪದ ಅಡಿ ಇದೇ ಠಾಣೆಯಲ್ಲಿ ಶಾಸಕರ ವಿರುದ್ದ ಮತ್ತೊಂದು ಎಫ್‌ಐಆ‌ರ್ ದಾಖಲಾಗಿದೆ. ವೇಲುನಾಯಕ್ ಎಂಬುವವರು ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಶಾಸಕ ಮುನಿರತ್ನ ಅವರು ಸೆಪ್ಟೆಂಬರ್​ 9 ರಂದು 20 ಲಕ್ಷ ಹಣ ಕೇಳಿದ್ದರು. ಹಣ ನೀಡಿದಿದ್ದರೆ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪಿಸಿದ್ದರು. ಈ ಪ್ರಕರಣ ಸಂಬಂಧ ಮುನಿರತ್ನ ಅವರಿಗೆ ನೋಟಿಸ್ ನೀಡಲು ವೈಯಾಲಿಕಾವಲ್ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

Tags:    

Similar News