ಚಿಕ್ಕಮಗಳೂರು: ಎರಡು ಕಾರುಗಳ ನಡುವೆ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು

ಒಂದು ಕಾರಿನ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

Update: 2025-11-09 07:17 GMT

ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ, ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.

ಚನ್ನಗಿರಿ ಮೂಲದ ಕುಮಾರಪ್ಪ (60) ಮತ್ತು ಸತೀಶ್ (35) ಮೃತ ದುರ್ದೈವಿಗಳು. ಹಿರೇಗೌಜ ಗ್ರಾಮದ ಸಮೀಪದ ತಿರುವಿನಲ್ಲಿ ಎದುರುಬದುರಾಗಿ ಬಂದ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿವೆ. ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.

ಒಂದು ಕಾರಿನ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದು ಕಾರಿನಲ್ಲಿದ್ದ ಚನ್ನಗಿರಿ ಮೂಲದ ಕುಮಾರಪ್ಪ ಮತ್ತು ಸತೀಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.  

Tags:    

Similar News