Kyasanur Forest Disease | ಮತ್ತಿಬ್ಬರಿಗೆ ಮಂಗನಕಾಯಿಲೆ ಸೋಂಕು; ಮಲೆನಾಡಿನಲ್ಲಿ ಆತಂಕ

ಎನ್‌.ಆರ್.ಪು ತಾಲೂಕಿನ ಮೂವರು ಹಾಗೂ ಚಿಕ್ಕಮಗಳೂರು ತಾಲೂಕಿನ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಕೊಪ್ಪ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಫ್‌ಡಿ ವಾರ್ಡ್‌ ತೆರೆಯಲಾಗಿದೆ.;

Update: 2025-01-27 08:49 GMT
ಕೊಪ್ಪ ತಾಲೂಕಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕೆಎಫ್‌ಡಿ ಸೋಂಕಿಗೆ ಕಾರಣವಾಗು ಉಣ್ಣೆ ಸಂಗ್ರಹಿಸಿದರು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನಕಾಯಿಲೆ ಪ್ರಕರಣಗಳು ಏರಿಕೆಯಾಗುತ್ತಿವೆ. ಕೊಪ್ಪ ತಾಲೂಕಿನ ಇಬ್ಬರಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

ಎನ್‌.ಆರ್.ಪುರ ತಾಲೂಕಿನ ಮೂವರು ಹಾಗೂ ಚಿಕ್ಕಮಗಳೂರು ತಾಲೂಕಿನ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಮಂಗನಕಾಯಿಲೆ ಹರಡಿರುವ ಹಿನ್ನೆಲೆಯಲ್ಲಿ ಕೊಪ್ಪ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಫ್‌ಡಿ ವಾರ್ಡ್‌ ತೆರೆಯಲಾಗಿದೆ.

ಕೊಪ್ಪ, ಎನ್‌.ಆರ್‌.ಪುರ ಹಾಗೂ ಚಿಕ್ಕಮಗಳೂರಿನ ವಿವಿಧ ಗ್ರಾಮಗಳಿಗೆ ತೆರಳಿ ಪರಿಶೀಲನೆ ನಡೆಸಿರುವ ಆರೋಗ್ಯ ಇಲಾಖೆ ಸಿಬ್ಬಂದಿ, ಅರಣ್ಯ ಪ್ರದೇಶಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಸೂಚನೆ ನೀಡುತ್ತಿದ್ದಾರೆ. ಅಲ್ಲದೇ ಮಂಗನಕಾಯಿಲೆ ಸೋಂಕಿನ ಲಕ್ಷಣಗಳು ಕಂಡು ಬಂದಿರುವವರ ರಕ್ತದ ಮಾದರಿಗಳನ್ನು ಸಂಗ್ರಹಿಸಿ, ಶಿವಮೊಗ್ಗದ ಪರಿಮಾಣು ಪ್ರಯೋಗಾಲಯಕ್ಕೆ ರವಾನಿಸುತ್ತಿದ್ದಾರೆ.

ಕಳೆದ ವಾರವಷ್ಟೇ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಿಗೆ ಮಂಗನಕಾಯಿಲೆಯ ಸೋಂಕು ತಗುಲಿತ್ತು. ಸೋಂಕಿತ ಯುವಕನಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಲೆನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಏಳು ಜಿಲ್ಲೆಗಳಲ್ಲಿ ಮಂಗನಕಾಯಿಲೆ ಸೋಂಕು ವ್ಯಾಪಿಸುತ್ತಿದೆ. ಕಳೆದ ವರ್ಷ ಚಿಕ್ಕಮಗಳೂರು ಜಿಲ್ಲೆ ಒಂದರಲ್ಲೇ 132 ಜನರಲ್ಲಿ ಕೆಎಫ್‌ಡಿ ಸೋಂಕು ಕಾಣಿಸಿಕೊಂಡಿತ್ತು. ಈ ಪೈಕಿ ನಾಲ್ವರು ಮೃತಪಟ್ಟಿದ್ದರು.

Tags:    

Similar News