ಶೋಭಾ ಕರಂದ್ಲಾಜೆ ಕಾರಿಗೆ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು

ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

Update: 2024-04-08 10:06 GMT
ಶೋಭಾ ಕರಂದ್ಲಾಜೆ ಅವರ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ.
Click the Play button to listen to article

ಬೆಂಗಳೂರು: ಚುನಾವಣಾ ರ್‍ಯಾಲಿ ವೇಳೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸೋಮವಾರ (ಏ.8)ರಂದು ನಡೆದಿದೆ.

ಕೆ.ಆರ್ ಪುರಂನ ಗಣೇಶ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ಸ್ಕೂಟರ್​ ಸವಾರ ಪ್ರಕಾಶ್ (35) ಸಾವನ್ನಪ್ಪಿದ್ದಾನೆ. ಸೋಮವಾರ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ‌ ಶೋಭಾ ಕರಂದ್ಲಾಜೆ ಕೆ.ಆರ್ ಪುರಂ ಭಾಗದಲ್ಲಿ ಪ್ರಚಾರ ಮಾಡುತ್ತಿದ್ದರು. ಅವರ ಕಾರನ್ನು ರಸ್ತೆ ಬದಿ ಪಾರ್ಕ್ ಮಾಡಲಾಗಿತ್ತು. ಈ ವೇಳೆ ಕಾರಿನ ಚಾಲಕ ಡೋರ್ ತೆಗೆದಿದ್ದು, ಹಿಂದೆಯಿಂದ ಬಂದ ಪ್ರಕಾಶ್​ಗೆ ಬಡಿದು ರಸ್ತೆಯ ಮೇಲೆ ಬಿದ್ದಿದ್ದಾರೆ. ಇದೇ ವೇಳೆ ಅವರ ಮೇಲೆ ಖಾಸಗಿ ಬಸ್ ಅವರ ಮೇಲೆ ಹರಿದಿದೆ. ತಕ್ಷಣವೇ ಕಾರ್ಯಕರ್ತರು ಪ್ರಕಾಶ್​ರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.  ಚಿಕಿತ್ಸೆ ಫಲಕಾರಿಯಾಗದೆ ಪ್ರಕಾಶ್​ ಸಾವನ್ನಪ್ಪಿದ್ದಾರೆ. ಕೆಆರ್​ ಪುರಂ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Full View

ಘಟನೆ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಇದೊಂದು ಅನಿರೀಕ್ಷಿತ ಘಟನೆ, ನಾವೆಲ್ಲರೂ ಮುಂದೆ ಹೋಗಿದ್ದೆವು, ಕಾರು ರಸ್ತೆ ಬದಿಯಲ್ಲಿ ನಿಂತಿತ್ತು. ನಮ್ಮ ಕಾರ್ಯಕರ್ತ ಪ್ರಕಾಶ್ ಅವರು ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ಅವರ ಮೇಲೆ ಬಸ್​ ಹರಿದಿದೆ. ವರದಿಯಲ್ಲಿ ತಲೆಗೆ ಪೆಟ್ಟು ಬಿದ್ದು ಸಾವಾಗಿದೆಯೇ, ಬಸ್​ ಹರಿದು ಸಾವಾಗಿದೆಯೇ ತಿಳಿಯಲಿದೆ. ಅದರೆ ಪಕ್ಷದ ನಿಷ್ಠಾವಂತ ಕಾರ್ಯಕರ್ತನನ್ನು ಕಳೆದುಕೊಂಡಿರುವುದು ನನಗೆ ತುಂಬಾ ನೋವಾಗಿದೆ. 24 ಗಂಟೆ ಕೂಡ ಪಕ್ಷಕ್ಕಾಗಿ ದುಡಿಯುತ್ತಿದ್ದರು. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ನಾವು ಕುಟುಂಬದ ಜೊತೆ ಇರಲಿದ್ದೇವೆ. ಅವರಿಗೆ ಸೂಕ್ತ ಪರಿಹಾರ ದೊರಕಿಸಿಕೊಡುವ ಕೆಲಸ ಮಾಡುತ್ತೇವೆ, ಕುಟುಂಬಕ್ಕೆ ಅಗತ್ಯವಾದ ನೆರವನ್ನು ನೀಡುತ್ತೇವೆ ಎಂದಿದ್ದಾರೆ.

Tags:    

Similar News