ರಾಜ್ಯದಲ್ಲಿ ಮತ್ತೊಂದು ಪ್ರಜ್ವಲ್ ಮಾದರಿ ಮತ್ತೊಂದು ಪ್ರಕರಣ: ಯುವ ಉದ್ಯಮಿ ಆರೋಪಿ ಪರಾರಿ
ಪ್ರಜ್ವಲ್ ಮಾದರಿಯ ಪ್ರಕರಣವೊಂದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.;
ರಾಜ್ಯವನ್ನೇ ಬೆಚ್ಚಿಬೀಳಿಸಿದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಪ್ರಕರಣ ಮಾಸುವ ಮುನ್ನವೇ ಅದೇ ಮಾದರಿಯ ಪ್ರಕರಣವೊಂದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಯುವ ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಲೈಂಗಿಕ ದೌರ್ಜನ್ಯದ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ. ಈ ಬಗ್ಗೆ ಪೋಕ್ಸೊ ಪ್ರಕರಣ ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ.
ಉದ್ಯಮಿ ಶ್ರೇಯಸ್ ನಾಯ್ಕ (25) ಆರೋಪಿ. ಬಾಲಕಿಯೊಬ್ಬಳ ಮೇಲೆ ಒಂದು ವರ್ಷದಿಂದ ಆರೋಪಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾನೆ. ವಿಡಿಯೋವನ್ನು ತೋರಿಸಿ ಬಾಲಕಿಗೆ ಬ್ಲ್ಯಾಕ್ ಮೇಲ್ ಮಾಡಿ ಮತ್ತೆ ಮತ್ತೆ ದೌರ್ಜನ್ಯ ಎಸಗಿದ್ದಾನೆ. ಇದೀಗ ಬಾಲಕಿ ಗರ್ಭಿಣಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಮೇ 18 ರಂದು ಪೋಕ್ಸೊ ಪ್ರಕರಣ ದಾಖಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಶ್ರೇಯಸ್ ಬಂಧನಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ.
ಇನ್ನು ಆರೋಪಿ ಶ್ರೇಯಸ್ ಶಾಲೆ- ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿ ಸುಮಾರು 50ಕ್ಕೂ ಅಧಿಕ ಅಶ್ಲೀಲ ವಿಡಿಯೊಗಳನ್ನು ಸೆರೆಹಿಡಿದಿದ್ದು, ಸುಮಾರು 8-9 ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಮಾಡಿರಬಹುದು ಎಂಬ ಶಂಕೆ ವ್ಯಕ್ಯವಾಗಿದೆ. ಯುವತಿಯರ ಜತೆಗಿನ ವಿಡಿಯೊಗಳನ್ನು ಸೆರೆಹಿಡಿದು ತನ್ನ ಲ್ಯಾಪ್‌ಟಾಪ್‌ನಲ್ಲಿ ಇರಿಸಿಕೊಂಡು ಬಳಿಕ ಯುವತಿಯರನ್ನು ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕವಾಗಿ ದುರ್ಬಳಕೆವ ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ.
ಸಂತ್ರಸ್ತೆ ಹೇಳಿಕೆ ಆಧರಿಸಿ ಆರೋಪಿ ಮನೆಯಿಂದ ಸೈಬರ್ ಠಾಣೆ ಪೊಲೀಸರು ಲ್ಯಾಪ್‌ಟಾಪ್ ವಶಕ್ಕೆ ಪಡೆದುಕೊಂಡಿದ್ದಾರೆ. ಇತರೆ ಯಾರಾದರೂ ಸಂತ್ರಸ್ತೆಯರಿದ್ದಲ್ಲಿ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.