ವಾಲ್ಮಿಕಿ ನಿಗಮದ ಹಗರಣ | ನಾಗೇಂದ್ರ ಆಣತಿಯಂತೆ ಹಣದ ವಹಿವಾಟು: ಇಡಿ

ಮಾಜಿ ಸಚಿವ ನಾಗೇಂದ್ರ ಆಣತಿಯಂತೆ ಹಣದ ವಹಿವಾಟು; ಇಡಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬಹುಕೋಟಿ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) 82ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

Update: 2024-09-10 12:30 GMT
ಮಾಜಿ ಸಚಿವ ಬಿ. ನಾಗೇಂದ್ರ
Click the Play button to listen to article

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ  ಬಹುಕೋಟಿ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ 82ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರು ಭಾಗಿಯಾಗಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಹಗರಣದ ಮಾಸ್ಟರ್ ಮೈಂಡ್ ಬಿ. ನಾಗೇಂದ್ರ ಎಂದು ಉಲ್ಲೇಖಿಸಲಾಗಿದೆ. ಬಿ. ನಾಗೇಂದ್ರ ಅವರು ಹಗರಣದ ಆರೋಪಿ, ಹೈದರಾಬಾದ್​ನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್​ನ ಎಂಡಿ ಸತ್ಯನಾರಾಯಣ ವರ್ಮಾ ಜೊತೆ ನಿಕಟ ಸಂಪರ್ಕ ಹೊಂದಿದ್ದು, ಹಣದ ಬಳಕೆಯ ಬಗ್ಗೆ ದೋಷಾರೋಪ ಪಟ್ಟಿಯಲ್ಲಿ ಬರೆದಿದ್ದಾರೆ.

ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಣತಿಯಂತೆ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಮನಿಟ್ರಯಲ್ ನಡೆದಿದೆ ಎಂದು ತನಿಖೆ ವೇಳೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಿ. ನಾಗೇಂದ್ರ ಸೇರಿದಂತೆ ಐವರು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

Tags:    

Similar News