ವಾಲ್ಮೀಕಿ ನಿಗಮದ ಹಗರಣ | ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷ ಬಂಧನ

ಬಂಧಿತ ಸತ್ಯನಾರಾಯಣ ಅವರನ್ನು ಮಂಗಳವಾರ (ಜೂ.4) ಬೆಂಗಳೂರಿಗೆ ಕರೆತರಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೋರಲಾಗುವುದು ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.;

Update: 2024-06-05 09:15 GMT
ಎಸ್‌ ಐ ಟಿ ಅಧಿಕಾರಿಗಳು ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷ ಸತ್ಯನಾರಾಯಣ ಅವರನ್ನು ಬಂಧಿಸಿದ್ದಾರೆ.
Click the Play button to listen to article

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಹೈದರಾಬಾದ್ ಮೂಲದ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ ಅಧ್ಯಕ್ಷ ಸತ್ಯನಾರಾಯಣ ಎಂಬುವರನ್ನು ಎಸ್‌ ಐ ಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಸತ್ಯನಾರಾಯಣ ಅವರನ್ನು ಮಂಗಳವಾರ (ಜೂ.4) ಬೆಂಗಳೂರಿಗೆ ಕರೆತರಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೋರಲಾಗುವುದು ಎಂದು ಮೂಲಗಳು ತಿಳಿಸಿವೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅನುದಾನ ದುರುಪಯೋಗವಾಗಿರುವುದಾಗಿ ಆರೋಪಿಸಿ ಡೆತ್ ನೋಟ್ ಬರೆದು‌ ನಿಗಮದ ಅಧಿಕಾರಿ ಚಂದ್ರಶೇಖರನ್ ಮೇ 26 ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಡೆತ್‌ನೋಟ್‌ ಮೂಲಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಸೇರಿದ 187 ಕೋಟಿ ರೂ.ಗಳ ಅನಧಿಕೃತ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿದೆ.

ಮಾರ್ಚ್ 2024 ರಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂಜಿ ರೋಡ್ ಶಾಖೆಯಲ್ಲಿರುವ ನಿಗಮದ ಬ್ಯಾಂಕ್ ಖಾತೆಯಿಂದ ಅದೇ ಬ್ಯಾಂಕ್‌ನ ಇತರ ಶಾಖೆಗಳಿಗೆ ಹಣ ವರ್ಗಾವಣೆ ಮಾಡಿದ್ದು, 89.62 ಕೋಟಿ ರೂ.ಗಳನ್ನು ಪ್ರಸಿದ್ಧ ಐಟಿ ಕಂಪನಿಗಳಿಗೆ ಮತ್ತು ಹೈದರಾಬಾದ್ ಮೂಲದ ಸಹಕಾರಿ ಬ್ಯಾಂಕ್‌ಗೆ ವರ್ಗಾಯಿಸಿರುವುದು ಬೆಳಕಿಗೆ ಬಂದಿತ್ತು.

Tags:    

Similar News