ಹಿರಿಯ ಹಾಸ್ಯ ನಟ ಎಂ.ಎಸ್. ಉಮೇಶ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

80 ವರ್ಷ ವಯಸ್ಸಿನ ನಟ ಎಂ.ಎಸ್. ಉಮೇಶ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರು ಮನೆಯಲ್ಲಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದ ಘಟನೆ ನಡೆದಿದ್ದು, ಕೂಡಲೇ ಅವರನ್ನು ಕುಟುಂಬದವರು ಆಸ್ಪತ್ರೆಗೆ ಸೇರಿಸಿದ್ದಾರೆ.

Update: 2025-10-10 10:53 GMT

ಹಿರಿಯ ಹಾಸ್ಯ ನಟ ಎಂ.‌ಎಸ್‌ ಉಮೇಶ್‌ ಅವರ ಸ್ಥಿತಿ ಗಂಭೀರವಾಗಿದೆ.  

Click the Play button to listen to article

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಎಂ. ಎಸ್. ಉಮೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

80 ವರ್ಷ ವಯಸ್ಸಿನ ನಟ ಎಂ.ಎಸ್. ಉಮೇಶ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರು ಮನೆಯಲ್ಲಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದ ಘಟನೆ ನಡೆದಿದ್ದು, ಕೂಡಲೇ ಅವರನ್ನು ಕುಟುಂಬದವರು ಆಸ್ಪತ್ರೆಗೆ ಸೇರಿಸಿದ್ದಾರೆ. ಸದ್ಯ ಅವರು ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

1960 ರಲ್ಲಿ 'ಮಾಣಿಕ್ಯ ರಾಜ' ಸಿನಿಮಾದ ಮೂಲಕ ಮುಖ್ಯ ಪಾತ್ರಗಳನ್ನು ಮಾಡಲು ಆರಂಭಿಸಿದ ಉಮೇಶ್ ಅವರು, 1975 ರಲ್ಲಿ 'ಕಥಾ ಸಂಗಮ' ಚಿತ್ರದ ನಟನೆಗಾಗಿ ರಾಜ್ಯ ಸರ್ಕಾರದ ಶ್ರೇಷ್ಠ ಪೋಷಕ ನಟ ಪ್ರಶಸ್ತಿ ಸಹ ಪಡೆದುಕೊಂಡಿದ್ದರು. ರಮೇಶ್ ಅರವಿಂದ್ ನಿರ್ದೇಶನದ 'ವೆಂಕಟ ಇನ್ ಸಂಕಟ' ಚಿತ್ರದಲ್ಲಿನ ಅವರ 'ಹಲ್ಲಿಲ್ಲದ ಅಜ್ಜಿ' ಪಾತ್ರವೂ ಬಹಳ ಜನಪ್ರಿಯವಾಗಿತ್ತು. ಚಿತ್ರರಂಗಕ್ಕೆ ಬರುವ ಮುನ್ನ, ಅವರು ನಾಟಕ ರಂಗದಲ್ಲಿ ಸಕ್ರಿಯರಾಗಿದ್ದರು. ಚಿಕ್ಕ ವಯಸ್ಸಿನಲ್ಲೇ ಕೆ. ಹಿರಣ್ಣಯ್ಯ ಮಿತ್ರ ಮಂಡಲಿ, ಗುಬ್ಬಿ ವೀರಣ್ಣನವರ ಕಂಪನಿಗಳಲ್ಲಿ ಬಾಲನಟರಾಗಿ ಅಭಿನಯಿಸಿ, ಪಿಯಾನೋ, ಹಾರ್ಮೋನಿಯಂನಂತಹ ವಾದನ ಕಲೆಗಳನ್ನೂ ಕರಗತ ಮಾಡಿಕೊಂಡಿದ್ದರು.

ಸುಮಾರು 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ಮತ್ತು ಹಾಸ್ಯ ಪಾತ್ರಗಳಲ್ಲಿ ನಟಿಸಿರುವ ಎಂ.ಎಸ್. ಉಮೇಶ್ ಅವರು ತಮ್ಮ ವಿಶಿಷ್ಟ ಕಾಮಿಡಿ ಮತ್ತು ಡೈಲಾಗ್ ಡೆಲಿವರಿ ಮೂಲಕ ಕನ್ನಡ ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ. ಹಿರಿಯ ನಟ ಉಮೇಶ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

Tags:    

Similar News