ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಕರ್ನಾಟಕ ಪ್ರವಾಸ; ಶ್ರವಣಬೆಳಗೊಳ, ಮೇಲುಕೋಟೆಗೆ ಭೇಟಿ

ಬೆಳಗ್ಗೆ ನಗರದ ಯಲಹಂಕ ವಾಯುನೆಲೆಗೆ ವಿಶೇಷ ವಿಮಾನದಲ್ಲಿ ಬಂದಿಳಿದ ಉಪರಾಷ್ಟ್ರಪತಿಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

Update: 2025-11-09 04:36 GMT

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಭಾನುವಾರ ಒಂದು ದಿನದ ಕರ್ನಾಟಕ ಪ್ರವಾಸಕ್ಕಾಗಿ ರಾಜಧಾನಿ ಬೆಂಗಳೂರಿಗೆ ಆಗಮಿಸಿದರು. ಪ್ರವಾಸದ ಅಂಗವಾಗಿ ಅವರು ಹಾಸನ ಜಿಲ್ಲೆಯ ಶ್ರವಣಬೆಳಗೊಳ, ಮಂಡ್ಯ ಜಿಲ್ಲೆಯ ಮೇಲುಕೋಟೆ ಹಾಗೂ ಮೈಸೂರು ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಳಗ್ಗೆ ನಗರದ ಯಲಹಂಕ ವಾಯುನೆಲೆಗೆ ವಿಶೇಷ ವಿಮಾನದಲ್ಲಿ ಬಂದಿಳಿದ ಉಪರಾಷ್ಟ್ರಪತಿಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕೇಂದ್ರ ಬೃಹತ್ ಕೈಗಾರಿಕೆಗಳ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ನಗರಾಭಿವೃದ್ಧಿ ಸಚಿವ ಬಿ.ಎ. ಸುರೇಶ್ (ಬೈರತಿ), ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಮ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಜಿ. ಮತ್ತು ಜೆಡಿಎಸ್ ಮುಖಂಡ ಪುಟ್ಟರಾಜು ಸೇರಿದಂತೆ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಯಲಹಂಕ ವಾಯುನೆಲೆಯಿಂದ ಹೆಲಿಕಾಪ್ಟರ್ ಮೂಲಕ ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಗೆ ತೆರಳಲಿರುವ ಉಪರಾಷ್ಟ್ರಪತಿಗಳು, ತಮ್ಮ ಪ್ರವಾಸ ಮುಗಿಸಿ ಇಂದೇ ಸಂಜೆ ನವದೆಹಲಿಗೆ ವಾಪಸಾಗಲಿದ್ದಾರೆ. 

Tags:    

Similar News