ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿ ಮಾಡಿದ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

ಈ ವೇಳೆ ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿ ದೇವೇಗೌಡರ ಜೊತೆಗಿನ ತಮ್ಮ ಸಂಬಂಧವನ್ನು ಸ್ಮರಿಸಿದರು.;

Update: 2025-08-21 11:50 GMT

ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿ ಮಾಡಿದರು. 

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ದೆಹಲಿ ನಿವಾಸಕ್ಕೆ ಬುಧವಾರ ಸಂಜೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಧಾಕೃಷ್ಣನ್ ಅವರನ್ನು ಬರಮಾಡಿಕೊಂಡರು.

ಈ ವೇಳೆ ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿ ದೇವೇಗೌಡರ ಜೊತೆಗಿನ ತಮ್ಮ ಸಂಬಂಧವನ್ನು ಸ್ಮರಿಸಿದರು. ಇದೇ ವೇಳೆ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ನೀಡಿದ ದೇವೇಗೌಡರಿಗೆ ರಾಧಾಕೃಷ್ಣನ್ ಅವರು ಧನ್ಯವಾದ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ಮಲ್ಲೇಶ್ ಬಾಬು, ಡಾ. ಸಿ.ಎನ್. ಮಂಜುನಾಥ್, ಜೆಡಿಎಸ್‌ನ ಹಿರಿಯ ಮುಖಂಡ ವೆಂಕಟರಾವ್ ನಾಡಗೌಡ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ವೇಳೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಸಚಿವ ಕುಮಾರಸ್ವಾಮಿ ಅವರು ಸಿ.ಪಿ. ರಾಧಾಕೃಷ್ಣನ್ ಅವರಿಗೆ ಶುಭ ಹಾರೈಸಿದರು.

Tags:    

Similar News