Kantara Movie | ಕಾಂತಾರ: ಚಾಪ್ಟರ್ 1 ಸಿನಿತಂಡಕ್ಕೆ ಗ್ರಾಮಸ್ಥರ ಎಚ್ಚರಿಕೆ

Kantara 2 | ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪ ತಂಡದ ಮೇಲೆ ಬಂದಿದೆ. ಸಿನಿಮಾ ತಂಡದ ವಿರುದ್ಧ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನೂ ಗ್ರಾಮಸ್ಥರು ನೀಡಿದ್ದಾರೆ.;

Update: 2025-01-20 05:55 GMT
Kantara Movie | ಕಾಂತಾರ: ಚಾಪ್ಟರ್ 1 ಸಿನಿತಂಡಕ್ಕೆ ಗ್ರಾಮಸ್ಥರ ಎಚ್ಚರಿಕೆ
ಕಾಂತಾರ

ರಿಷಬ್ ಶೆಟ್ಟಿ ಅವರ ‘ಕಾಂತಾರ: ಚಾಪ್ಟರ್ 1’ ಸಿನಿತಂಡಕ್ಕೆ ಗ್ರಾಮಸ್ಥರು ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದಾರೆ. ಸಿನಿಮಾದ ಶೂಟಿಂಗ್ ಕುಂದಾಪುರದ ಸುತ್ತಮುತ್ತ ಸಾಗುತ್ತಿದೆ. ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪ ತಂಡದ ಮೇಲೆ ಬಂದಿದೆ. ಸಿನಿಮಾ ತಂಡದ ವಿರುದ್ಧ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.

ಚಿತ್ರದ ಶೂಟಿಂಗ್ ಹಾಗೂ ಅದರ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕುಂದಾಪುರದಲ್ಲೇ ನಡೆಯುತ್ತಿವೆ. ಚಿತ್ರತಂಡ, ಶೂಟಿಂಗ್​ಗಾಗಿ ಗೋಮಾಳ ಜಾಗಕ್ಕೆ ಪರವಾನಗಿ ಪಡೆದಿದೆ. ಆದರೆ, ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪವನ್ನು ಗ್ರಾಮಸ್ಥರು ಮಾಡಿದ್ದು, ಚಿತ್ರತಂಡದ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಚಿತ್ರೀಕರಣಕ್ಕೆ ಯಾವೆಲ್ಲಾ ಪರವಾನಿಗೆ ನೀಡಿದ್ದಾರೆ ಎಂಬ ಮಾಹಿತಿ ಕೊಡಬೇಕು. ಅರಣ್ಯ, ಕಂದಾಯ ಇಲಾಖೆಯವರು ಮಾಹಿತಿ ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ. ಸದ್ಯ ಕಾಡಿನಲ್ಲಿ ಬೆಂಕಿ ಹಚ್ಚಿದ್ದರಿಂದ ಕಾಡುಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ ಎನ್ನಲಾಗಿದೆ. ವನ್ಯಜೀವಿಗಳಿರುವ ಪ್ರದೇಶದಲ್ಲಿ ಚಿತ್ರೀಕರಣ ನಡೆಸಬಾರದು ಎಂಬುದು ಗ್ರಾಮಸ್ಥರ ಆಗ್ರಹ. ‘ಕೂಡಲೇ ಶೂಟಿಂಗ್​​ ಸ್ಥಗಿತಗೊಳಿಸಿ ಪರಿಸರ ಉಳಿಸಿ. ಇಲ್ಲವಾದರೆ ಡಿಸಿ ಕಚೇರಿ ಮುಂದೆ ಧರಣಿ ನಡೆಸುತ್ತೇವೆ’ ಎಂದು ಗ್ರಾಮಸ್ಥರ ಎಚ್ಚರಿಕೆ ನೀಡಿದ್ದಾರೆ.

Tags:    

Similar News