Vinay somaiah | ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ; ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಸೇರಿಸಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.;

Update: 2025-04-05 07:45 GMT

ಕೊಡಗು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣದ ಎಫ್‌ಐಆರ್‌ನಲ್ಲಿ ಶಾಸಕರಾದ ಎ.ಎಸ್‌.ಪೊನ್ನಣ್ಣ ಹಾಗೂ ಮಂತರ್ ಗೌಡ ಹೆಸರನ್ನು ಸೇರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದು, ಬಿಜೆಪಿ ಬೇಡಿಕೆಯನ್ನು ತಳ್ಳಿ ಹಾಕಿದ್ದಾರೆ. 

ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಾಧ್ಯಮದವರಿಗೆ ತಿಳಿಸಿದರು. 

ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಸೇರಿಸಬೇಕೆಂಬ ಬಿಜೆಪಿ ನಾಯಕರ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರ ಬೇಡಿಕೆಗಳಿಗೆ ಉತ್ತರಿಸಲು ಸಾಧ್ಯವಿಲ್ಲ. ಬಿಜೆಪಿಯವರು ಹತಾಶರಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಸಾವಿನಲ್ಲೂ ರಾಜಕೀಯ ಮಾಡುವುದು ಬಿಜೆಪಿಗೆ ಅಭ್ಯಾಸವಾಗಿದೆ. ಅವರು ಹೇಳಿದ್ದಕ್ಕೆಲ್ಲಾ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ. 

ಪ್ರಕರಣ ಸಂಬಂಧ ಕಾಂಗ್ರೆಸ್ ವಕ್ತಾರ ತೆನ್ನೀರ ಮಹಿನಾ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್‌. ಪೊನ್ನಣ್ಣ, ಮಂತರ್ ಗೌಡ ವಿರುದ್ಧ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿನಯ್ ಸೋಮಯ್ಯ ಸಹೋದರ ಜೀವನ್ ಪೊಲೀಸರಿಗೆ 6 ಪುಟಗಳ ದೂರು ಸಲ್ಲಿಸಿದ್ದಾರೆ. ಇದರ ಆಧಾರದ ಮೇಲೆ ಬಿಎನ್‌ಎಸ್ ಸೆಕ್ಷನ್ 108, ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ತೆರಾ ಮಹಿನಾ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (39) ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್‌ನಲ್ಲಿ ವಿರಾಜಪೇಟೆ ಶಾಸಕ ಪೊನ್ನಣ್ಣ ಆಪ್ತ ತನ್ನೀರಾ ಮಹೀನಾ ಕಾರಣ ಎಂದು ಉಲ್ಲೇಖಿಸಿದ್ದರು. 

Tags:    

Similar News