ಮತ ಕಳವು ಪ್ರಕರಣ: ರಾಹುಲ್ ಗಾಂಧಿ ರ‍್ಯಾಲಿಗೆ ವರಿಷ್ಠರಿಂದ ರೂಪುರೇಷೆ ಸಿದ್ಧ
ರ‍್ಯಾಲಿಗೆ ಕಮೀಷನರೇಟ್ ಕಡೆಯಿಂದ ಎಸ್‌ಒಪಿ ಪಡೆಯಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜನಜಂಗುಳಿ ನಿಭಾಯಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.;
ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ
ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರ ವ್ಯಾಪ್ತಿಯಲ್ಲಿ ಮತ ಕಳವಿಗೆ ಸಂಬಂಧಿಸಿದಂತೆ ಆಗಸ್ಟ್ 5 ರಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ರ‍್ಯಾಲಿ ನಡೆಸಲು ಉದ್ದೇಶಿಸಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ.ವೇಣುಗೋಪಾಲ್ ನಗರಕ್ಕೆ ಆಗಮಿಸಿ ಹೋರಾಟದ ರೂಪುರೇಷೆ ಬಗ್ಗೆ ತೀರ್ಮಾನಿಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರ‍್ಯಾಲಿಗೆ ಕಮೀಷನರೇಟ್ ಕಡೆಯಿಂದ ಎಸ್‌ಒಪಿ ಪಡೆಯಲಾಗಿದೆ. ಮುನ್ನೆಚ್ಚರಿಕೆಯಾಗಿ ಜನಜಂಗುಳಿ ನಿಭಾಯಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ರ‍್ಯಾಲಿಗೆ ಕಮೀಷನರೇಟ್ ಕಡೆಯಿಂದ ಎಸ್‌ಒಪಿ ಪಡೆಯಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜನಜಂಗುಳಿ ನಿಭಾಯಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
ದಲಿತ ಸಚಿವರು, ಶಾಸಕರ ಸಭೆ
ಒಳಮೀಸಲಾತಿ ಕುರಿತಂತೆ ನಾಗಮೋಹನ್ ದಾಸ್ ಅವರು ಸರ್ಕಾರಕ್ಕೆ ವರದಿ ಕೊಡುವ ಮೊದಲು ನಾವು ಚರ್ಚೆ ಮಾಡೋಣ. ಈ ವಿಚಾರದಲ್ಲಿ ಯಾರಿಗೂ ಸಹ ಬೇಸರ ಆಗುವುದು ಬೇಡ. ನಮ್ಮಲ್ಲಿರುವ ಅಭಿಪ್ರಾಯಗಳನ್ನು ಸರಿ ಮಾಡಿಕೊಳ್ಳೋಣ ಎಂಬ ನಿಟ್ಟಿನಲ್ಲಿ ಸಭೆ ಕರೆದಿದ್ದೇನೆ. ಚರ್ಚೆ ನಂತರ ಅಭಿಪ್ರಾಯಗಳು ಗೊತ್ತಾಗಲಿವೆ ಎಂದು ತಿಳಿಸಿದರು.
ಒಳಮೀಸಲಾತಿ ವರದಿ ಪೂರ್ಣವಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಸಲ್ಲಿಸಿಲ್ಲ. ಸದ್ಯದಲ್ಲಿ ಸಲ್ಲಿಸುತ್ತೇವೆ ಎಂದಿದ್ದಾರೆ. ಒಳ ಪಂಗಡಗಳ ಬಗ್ಗೆ ಚರ್ಚೆ ಮಾಡಿಕೊಳ್ಳುವುದು ಸೂಕ್ತ. ಒಳಮೀಸಲಾತಿ ಕುರಿತು ಶಾಸಕರು ಮಾತಾಡಿಕೊಳ್ಳುವುದಿಕ್ಕೆ ಯಾರು ಬ್ರೆಕ್ ಹಾಕುವುದಿಲ್ಲ ಎಂದರು.
ಬೆಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಎಸ್‌ಒಪಿ ಮಾಡಿಕೊಂಡಿದ್ದಾರೆ. ಅದನ್ನು ಇಂಪ್ಲಿಮೆಂಟ್ ಮಾಡುತ್ತಾರೆ. ಇಲಾಖೆಗೆ ಅನೇಕ ಅನುಭವಗಳಾಗಿವೆ. ಆದ್ದರಿಂದ ಲಕ್ಷಾಂತರ ಜನ ಸೇರುವ ನಿರೀಕ್ಷೆ ಮಾಡುವುದಿಲ್ಲ. ಹತ್ತಿರದ ಜಿಲ್ಲೆಗಳಿಂದ ಮುಖಂಡರು, ಕಾರ್ಯಕರ್ತರು ಬರುತ್ತಾರೆ ಎಂದು ಅಧ್ಯಕ್ಷರು ತಿಳಿಸುತ್ತಾರೆ. ಎಲ್ಲ ರೀತಿಯ ಎಚ್ಚರಿಕೆಯನ್ನು ಪೊಲೀಸ್ ಇಲಾಖೆ ವತಿಯಿಂದ ತೆಗೆದುಕೊಳ್ಳುತ್ತೇವೆ. ರಾಹುಲ್ ಗಾಂಧಿಯವರಿಗೆ ಝಡ್ ಪ್ಲಸ್ ಸೆಕ್ಯೂರಿಟಿ ಕೊಟ್ಟಿರುತ್ತಾರೆ ಎಂದು ತಿಳಿಸಿದರು.
ಅಲ್‌ಖೈದಾ ನಂಟು: ಮಹಿಳೆ ಬಂಧನ
ಬೆಂಗಳೂರಿನಲ್ಲಿ ಸ್ಪೀಪರ್ ಸೆಲ್‌ಗಳಿವೆ ಎಂದು ಈ ಹಿಂದೆ ವರದಿಯಾಗಿತ್ತು. ತನಿಖಾ ಏಜೆನ್ಸಿ ಪತ್ತೆಹಚ್ಚಿದ್ದಾರೆ. ಅಲ್‌ಖೈದಾ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಮಹಿಳೆ ಕರ್ನಾಟಕದವಳಲ್ಲ. ಈ ಬಗ್ಗೆ ತನಿಖಾ ಸಂಸ್ಥೆಯವರು ಮಾಹಿತಿ ಹಂಚಿಕೊಂಡಿಲ್ಲ ಎಂದು ತಿಳಿಸಿದರು.
ಮೈಸೂರಿನಲ್ಲಿ ಎಂಡಿಎಂಎ ತಯಾರಿಸುತ್ತಿದ್ದ ಆರೋಪಿಗಳು ಇಪ್ಪತ್ತು ದಿನದ ಹಿಂದೆ ಬಂದಿದ್ದರು. ಮುಂಬೈನಲ್ಲಿ ಆರೋಪಿಯನ್ನು ಹಿಡಿದಾಗ ಸುಳಿವು ಆಧರಿಸಿ ಬಂದಿದ್ದಾರೆ. ನಮ್ಮ ರಾಜ್ಯದಲ್ಲಿಯೂ ಸಹ ಇಂತಹ ಪ್ರಕರಣಗಳು ಬೆಳಕಿಗೆ ಬಂದಾಗ, ನಮ್ಮ ಪೊಲೀಸರು ಬೇರೆ ರಾಜ್ಯಗಳಿಗೆ ಹೋಗಿ ಆರೋಪಿಗಳನ್ನು ಹಿಡಿದುಕೊಂಡು ಬರುತ್ತಾರೆ. ಇದು ದೇಶದಾದ್ಯಂತ ನಡೆಯುವ ಪ್ರಕ್ರಿಯೆ ಎಂದು ಸ್ಪಷ್ಟಪಡಿಸಿದರು.