Waqf Asset Issue : ರೈತರ ಪಹಣಿಯಲ್ಲಾದ ತಿದ್ದುಪಡಿಗಳ ರದ್ದತಿಗೆ ಸರ್ಕಾರ ತೀರ್ಮಾನ

ವಕ್ಫ್‌ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿವೆ. ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನಮಾಡುತ್ತಿವೆ ಎಂದು ಸಿಎಂ ಆರೋಪಿಸಿದ್ದಾರೆ.

Update: 2024-11-02 09:18 GMT
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಕ್ಫ್‌ ವಿವಾದ ಕುರಿತಂತೆ ಕಂದಾಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು

ವಕ್ಫ್‌ ಆಸ್ತಿ ವಿಚಾರದಲ್ಲಿ ರೈತರಿಗೆ ನೀಡಿರುವ ನೋಟಿಸ್‌ಗಳನ್ನು ತಕ್ಷಣವೇ ವಾಪಸ್‌ ಪಡೆಯಬೇಕು. ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. 

ಬೆಂಗಳೂರಿನಲ್ಲಿ ಶನಿವಾರ ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ನಡೆಸಿದ ಸುದೀರ್ಘ ಸಭೆಯಲ್ಲಿ ಮಾತನಾಡಿದರು. 

ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಿಎಂ, ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಗರಂ ಆದರು. ವಕ್ಫ್‌ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿವೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ ಎಂದು ಆರೋಪಿಸಿದರು.

ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕಬಾರದು. ಅಪ ಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿನಂತಿ ಮಾಡಿದರು. ಅಧಿಕಾರಿಗಳೂ ಕೂಡ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನ ಕೈಗೊಳ್ಳಬಾರದು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ,  ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್‌ ಮಂಡಳಿಯ ಸಿಇಒ ಜಿಲಾನಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಅಲ್ಫ ಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮನೋಜ್‌ ಜೈನ್‌‌ ಮುಂತಾದವರು ಹಾಜರಿದ್ದರು.

Tags:    

Similar News