Waqf Assets Dispute | ಕ್ರಮ ಕೈಗೊಂಡ ಬಗ್ಗೆ ವರದಿ ಸಲ್ಲಿಸಲು ಪ್ರಾದೇಶಿಕ ಆಯುಕ್ತರಿಗೆ ಸೂಚನೆ
ವಕ್ಫ್ ಆಸ್ತಿಗಳ ಖಾತೆ ಬದಲಾವಣೆಗೆ ಬಾಕಿ ಇರುವ ಪ್ರಕರಣಗಳಲ್ಲಿ ಕೈಗೊಂಡ ಕ್ರಮದ ಅನುಪಾಲನಾ ವರದಿಯನ್ನು ಇಂದೇ ಸರ್ಕಾರಕ್ಕೆ ಸಲ್ಲಿಸುವಂತೆ ಮತ್ತೊಮ್ಮೆ ಸೂಚನೆ ನೀಡಲಾಗಿದೆ.;
By : The Federal
Update: 2024-11-09 10:24 GMT
ವಕ್ಫ್ ಆಸ್ತಿಗಳ ಖಾತೆ ಬದಲಾವಣೆಗೆ ಬಾಕಿ ಇರುವ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಇಂದೇ ಅನುಪಾಲನಾ ವರದಿ ಸಲ್ಲಿಸುವಂತೆ ರಾಜ್ಯದ ನಾಲ್ಕು ಪ್ರಾದೇಶಿಕ ಆಯುಕ್ತರಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿಮಲಮ್ಮ ಸಿ. ಪತ್ರ ಬರೆದಿದ್ದಾರೆ.
ರಾಜ್ಯಮಟ್ಟದ ವಕ್ಫ್ ಆಸ್ತಿಗಳ ಕಾರ್ಯಪಡೆಯ ಕಾರ್ಯಗಳಲ್ಲಿ ಸಾಧಿಸಿದ ಪ್ರಗತಿಯ ನಾಲ್ಕನೇ ಪರಿಶೀಲನಾ ಸಭೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಖಾತೆ ಬದಲಾವಣೆಗೆ ಬಾಕಿಯಿರುವ ಒಟ್ಟು 21167 ಪ್ರಕರಣಗಳಲ್ಲಿ ಅಗತ್ಯ ಕ್ರಮ ವಹಿಸಿ, ಅನುಪಾಲನಾ ವರದಿಯನ್ನು ತುರ್ತಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿತ್ತು.
ಈ ಕುರಿತು ಇದುವರೆಗೆ ಯಾವುದೇ ಮಾಹಿತಿ ಸ್ವೀಕೃತವಾಗಿಲ್ಲ. ಆದ್ದರಿಂದ, ವಕ್ಫ್ ಆಸ್ತಿಗಳ ಖಾತೆ ಬದಲಾವಣೆಗೆ ಬಾಕಿ ಇರುವ ಪ್ರಕರಣಗಳಲ್ಲಿ ಕೈಗೊಂಡ ಕ್ರಮದ ಅನುಪಾಲನಾ ವರದಿಯನ್ನು ಇಂದೇ ಸರ್ಕಾರಕ್ಕೆ ಸಲ್ಲಿಸುವಂತೆ ಮತ್ತೊಮ್ಮೆ ಸೂಚನೆ ನೀಡಲಾಗಿದೆ.