ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನಕ್ಕೆ ವಾರೆಂಟ್

ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷ್ಣ ವಿರುದ್ಧ ಮೈಸೂರು ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿಗೊಳಿಸಿದೆ.

Update: 2024-10-02 07:15 GMT
ಸ್ನೇಹಮಯಿ ಕೃಷ್ಣ
Click the Play button to listen to article

ಮುಡಾದಲ್ಲಿ ಅಕ್ರಮ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷ್ಣ ವಿರುದ್ಧ ಮೈಸೂರು ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿಗೊಳಿಸಿದೆ.

ಕೃಷ್ಣ ವಿರುದ್ಧ 2015ರಲ್ಲಿ ಕುಮಾರ್ ಎಂಬುವರು ಚೆಕ್‌ಬೌನ್ಸ್‌ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯದಲ್ಲಿ ಮಂಗಳವಾರ ನಡೆದ ವಿಚಾರಣೆಗೆ ಕೃಷ್ಣ ಹಾಜರಾಗಬೇಕಿತ್ತು. ಗೈರಾದ ಹಿನ್ನೆಲೆಯಲ್ಲಿ ವಾರಂಟ್ ಜಾರಿಗೊಳಿಸಿ ನ್ಯಾಯಾಧೀಶರು ಆದೇಶಿಸಿದರು.

ಎನ್.ಕುಮಾರ್ ಎಂಬುವವರು 2015ರಲ್ಲಿ ರಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು ಅದು ಎವಿಡೆನ್ಸ್ ಹಂತದಲ್ಲಿದ್ದು, ಮಂಗಳವಾರ ವಿಚಾರಣೆಗೆ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೈರು ಹಾಜರಾದ ಕಾರಣ ನ್ಯಾಯಾಲಯವು ಜಾಮೀನು ರಹಿತ ಬಂಧನ ಆದೇಶ ಹೊರಡಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 6 ಕ್ಕೆ ಮುಂದೂಡಿದೆ.

Tags:    

Similar News