ಮತ್ತೆ ಹಾಲಿನ ದರ ಹೆಚ್ಚಳ | ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Update: 2024-09-14 06:12 GMT
ನಂದಿನಿ ಹಾಲಿನ ದರದ ಹೆಚ್ಚಳದ ಬಗ್ಗೆ ಬಹಿರಂಗವಾಗಿಯೇ ಸಿದ್ದರಾಮಯ್ಯ ಘೋಷಿಸಿದ್ದಾರೆ.
Click the Play button to listen to article

ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ  ಘೋಷಣೆ ಮಾಡಿದ್ದಾರೆ. 

ಮಾಗಡಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ, ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದಾರೆ.

ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ನಮ್ಮ ಸರ್ಕಾರ ಯಾವಾಗಲೂ ರೈತರ ಪರ, ಹಾಲು ಉತ್ಪಾದಕರ ಪರ, ದಲಿತರು, ಬಡವರ ಪರ ಇರುತ್ತದೆ ಎಂದು ತಿಳಿಸಿದ್ದಾರೆ. 

ನೆರೆಹೊರೆಯ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ನಮ್ಮ ರೈತರು, ಹಾಲು ಉತ್ಪಾದಕರು ಎಷ್ಟೊಂದು ಕಷ್ಟದಲ್ಲಿ ಹೈನುಗಾರಿಕೆ ಮಾಡುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ. ಹಾಗಾಗಿಯೇ ಈ ಮೊದಲು ಹಾಲಿನ ಐದು ರೂಪಾಯಿ ಪ್ರೋತ್ಸಾಹ ಧನ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದ್ದೆವು. ಈಗ ಮತ್ತೊಮ್ಮೆ ಹಾಲು ದರ ಹೆಚ್ಚಳದ ಮೂಲಕ ಹಾಲು ಉತ್ಪಾದಕರ ಸಂಕಷ್ಟದ ಹೊರೆ ಇಳಿಸುವ ಯೋಚನೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರವನ್ನು ಜೂನ್‌ 25 ರಂದು ಏರಿಕೆ ಮಾಡಿತ್ತು. ಆಗ ಪ್ರತಿ ಲೀಟರ್‌ ಹಾಲಿನ ದರ 2 ರೂ. ಹೆಚ್ಚಳ ಮಾಡಲಾಗಿತ್ತು.

ಪ್ರತಿ ಲೀಟರ್‌ ಪ್ಯಾಕೆಟ್‌ ಹಾಲಿನ ದರವನ್ನು 2 ರೂ. ಹೆಚ್ಚಿಸಲಾಗಿತ್ತು. ಇದರ ಜೊತೆ ಪ್ಯಾಕೆಟ್‌ ಗಾತ್ರವನ್ನು ದೊಡ್ಡದು ಮಾಡಿತ್ತು.1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲನ್ನು 1,050 ಎಂಎಲ್‌, ಅರ್ಧ ಲೀಟರ್‌ ಪ್ಯಾಕೆಟ್‌ ಅನ್ನು 550 ಎಂಎಲ್‌ ಹಾಲು ಸಿಗುವಂತೆ ಗಾತ್ರವನ್ನು ದೊಡ್ಡದು ಮಾಡಲಾಗಿತ್ತು. ಹಾಲಿನ ದರ ಹೆಚ್ಚಳಕ್ಕೆ ಹಾಲಿನ ಪ್ರಮಾಣ ಹೆಚ್ಚಳ ಮಾಡಿರುವುದನ್ನು ಬೋನಸ್‌ ಆಗಿ ನೀಡಿದ್ದ ಸರ್ಕಾರ, ರಾಜ್ಯದಲ್ಲಿ ಹಾಲು ಉತ್ಪಾದನೆ ಹೆಚ್ಚಳವಾಗಿರುವುದರಿಂದ ಹಾಲು ಉತ್ಪಾದಕರ ನೆರವಿಗಾಗಿ ಈ ಕ್ರಮ ಕೈಗೊಂಡಿರುವುದಾಗಿ ಹೇಳಿತ್ತು/

ಇದೀಗ ಮೂರೇ ತಿಂಗಳಲ್ಲಿ ಮತ್ತೊಂದು ಹಾಲು ದರ ಹೆಚ್ಚಳದ ಸೂಚನೆಯನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರದ ಖಜಾನೆ ಖಾಲಿಯಾಗಿದೆ. ಹಾಗಾಗಿ ರೈತರು ಸೇರಿದಂತೆ ವಿವಿಧ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಉತ್ಪಾದಕರಿಗೆ ನೀಡಬೇಕಾದ ಸಹಾಯಧನ, ನೆರವು ನೀಡಲು ಸರ್ಕಾರದ ಬಳಿ ಕಾಸಿಲ್ಲ ಎಂಬ ಆರೋಪಗಳ ನಡುವೆ ಸರ್ಕಾರದ ಹಾಲು ದರ ಹೆಚ್ಚಳದ ನಿರ್ಧಾರ ತೀವ್ರ ಚರ್ಚೆಗೆ ಒಳಗಾಗಿದೆ.

Tags:    

Similar News