ಪತ್ನಿ ಕಿರುಕುಳ | ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ನೊಂದ ಪತಿ

ಮೃತ ಬಾಲರಾಜ್‌ 18 ವರ್ಷದ ಹಿಂದೆ ಪತ್ನಿ ಕುಮಾರಿಯನ್ನು ಮದುವೆಯಾಗಿದ್ದರು. ಆದರೆ ಹೆಂಡತಿ ಕಿರುಕುಳದಿಂದಾಗಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.;

Update: 2024-12-16 12:03 GMT
ಆತ್ಮಹತ್ಯೆ ಮಾಡಿಕೊಂಡಿರುವ ಬಾಲರಾಜ್
Click the Play button to listen to article

ಹೆಂಡತಿಯ ಕಿರುಕುಳದಿಂದ ನೊಂದ ಪತಿಯೊಬ್ಬ ಆತ್ಮಹತ್ಯೆಗೆ ಶರಣಾದ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ಒಂದು ವಾರದಲ್ಲಿ ಪತ್ನಿಯರ ಕಿರುಕುಳದಿಂದ ಬೇಸತ್ತು ಪತಿ ಜೀವ ತೆಗೆದುಕೊಂಡ ಮೂರನೇ ಪ್ರಕರಣ ಇದಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆ ಸಿಲುವೆಪುರದಲ್ಲಿ ಈ ಘಟನೆ ನಡೆದಿದ್ದು, ಬಾಲರಾಜ್(41) ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾದ ದುರ್ದೈವಿ. 

ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆಯ ಕಿರುಕುಳದಿಂದ ಬೇಸತ್ತು ಬಾಲರಾಜ್‌ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮೃತ ಬಾಲರಾಜ್‌ 18 ವರ್ಷದ ಹಿಂದೆ ಪತ್ನಿ ಕುಮಾರಿಯನ್ನು ಬಾಲರಾಜ್ ಎರಡನೇ ಮದುವೆಯಾಗಿದ್ದರು. ಆದರೆ ಹೆಂಡತಿ ಅಕ್ರಮ ಸಂಬಂಧ ಹೊಂದಿರುವ ಆರೋಪದೊಂದಿಗೆ ಕಿರುಕುಳ ಕೂಡ ನೀಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಗಲಾಟೆ ನಡೆದು ಪತ್ನಿ ಮನೆ ಬಿಟ್ಟು ತವರು ಸೇರಿದ್ದರು. ಇತ್ತ ಯಾರು ಇಲ್ಲದ ವೇಳೆ ಮನೆಯ ಫ್ಯಾನ್​ಗೆ ನೇಣುಬಿಗಿದುಕೊಂಡು ಬಾಲರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೃತ ಬಾಲರಾಜ್ ಗ್ರಾಮಾಂತರ ಭಾಗದಲ್ಲಿ ಕ್ರಿಕೆಟ್ ಪಟುವಾಗಿದ್ದರು. ತನ್ನ ಮೃತದೇಹದ ಜೊತೆ ತಾನು ಪಡೆದಿದ್ದ ಟ್ರೋಫಿ, ಬ್ಯಾಟ್, ಬಾಲ್, ವಿಕೆಟ್ ಇಡುವಂತೆ ಡೆತ್ ನೋಟ್​​ನಲ್ಲಿ ಉಲ್ಲೇಖಿಸಿದ್ದಾರೆ. ಅವರ ಕೊನೆಯ ಆಸೆಯಂತೆ ಶವದ ಪೆಟ್ಟಿಗೆಯಲ್ಲಿ ಎಲ್ಲವನ್ನು ಇಟ್ಟು ಶವ ಸಂಸ್ಕಾರ ಮಾಡಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಹೆಂಡತಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣ ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಅತುಲ್‌ ಸಾವಿನ ಬೆನ್ನಲ್ಲೇ ಹೆಂಡತಿ, ಮಾವನ ಕಿರುಕುಳಕ್ಕೆ ಬೇಸತ್ತು ಪೊಲೀಸ್​ ಕಾನ್‌ಸ್ಟೇಬಲ್ ತಿಪ್ಪಣ್ಣ ಎಂಬುವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದರು.

Tags:    

Similar News