Charmadi Ghat Wildfire | ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು
Charmadi Ghat Wildfire| ಕಾಡ್ಗಿಚ್ಚಿನಿಂದಾಗಿ ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.;
By : The Federal
Update: 2025-01-21 06:36 GMT
ಪಶ್ಚಿಮಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶ ಚಾರ್ಮಾಡಿ ಅರಣ್ಯದಲ್ಲಿ ಸೋಮವಾರ ರಾತ್ರಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ.
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಯು ಬೆಂಕಿಯನ್ನು ನಂದಿಸಿದ್ದಾರೆ. ಅರಣ್ಯಾಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ಬೆಂಕಿ ನಂದಿಸಿದ್ದಾರೆ. ಕಾಡ್ಗಿಚ್ಚಿನಿಂದಾಗಿ ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ಕೂಡ ಪಶ್ಚಿಮಘಟ್ಟಗಳ ಉದ್ದಕ್ಕೂ ಆವರಿಸಿತ್ತು. ಮೊದಲ ಬಾರಿಗೆ ಮಂಗಳೂರು-ಬೆಂಗಳೂರು ಮಾರ್ಗದ ಸುಬ್ರಹ್ಮಣ್ಯ ರಸ್ತೆ-ಸಕಲೇಶಪುರ ಘಾಟ್ ವಿಭಾಗದಲ್ಲಿ ರೈಲುಗಳ ಸಂಚಾರಕ್ಕೆ ಅಡ್ಡಿಯಾಗಿತ್ತು.