ಬೀದಿ ನಾಯಿಗಳ ನಿಯಂತ್ರಣಕ್ಕೆ ಸುಪ್ರೀಂ ಆದೇಶ; ʼಪರಿಶೀಲಿಸುತ್ತೇನೆ' ಎಂದು ಸಿಜೆಐ

ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿರುವ ಎಲ್ಲಾ ಬೀದಿ ನಾಯಿಗಳನ್ನು ಎಂಟು ವಾರಗಳ ಒಳಗೆ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು ಎಂದು ಸೋಮವಾರ ಸುಪ್ರೀಂಕೋರ್ಟ್ ದ್ವಿಸದಸದ್ಯ ಪೀಠ ಆದೇಶಿಸಿತ್ತು.;

Update: 2025-08-13 08:45 GMT

ಸುಪ್ರೀಂ ಕೋರ್ಟ್

ಬೀದಿ ನಾಯಿಗಳಿಗೆ ನಿಯಮಿತವಾಗಿ ಸಂತಾನಹರಣ ಮತ್ತು ಲಸಿಕೆ ಹಾಕುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ದ್ವಿಸದಸ್ಯ ಪೀಠದ ಆದೇಶವನ್ನು ಪರಿಶೀಲಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಭರವಸೆ ನೀಡಿದ್ದಾರೆ.

ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಬೀದಿ ನಾಯಿಗಳನ್ನು ಎಂಟು ವಾರಗಳೊಳಗೆ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು ಎಂಬ ಸುಪ್ರೀಂಕೋರ್ಟ್‌ ಆದೇಶಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.  ಕೆಲವರು ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದರೆ, ಇನ್ನು ಕೆಲವರು ಇದು ತರ್ಕಬದ್ಧವಲ್ಲ. ಮಾನವ-ನಾಯಿ ಸಂಘರ್ಷ ಹೆಚ್ಚಿಸಬಹುದು ಎಂದು ಕಳವಳ ವ್ಯಕ್ತಪಡಿಸಿದ್ದರು. 

ಬೀದಿ ನಾಯಿಗಳ ಸ್ಥಳಾಂತರ ಅಥವಾ ಕೊಲ್ಲುವುದನ್ನು ನಿಷೇಧಿಸುವ ಹಿಂದಿನ ಆದೇಶ ಹಾಗೂ ಅವುಗಳ ಚಿಕಿತ್ಸೆಗೆ ಸಂಬಂಧಿಸಿದ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಿರುವ ವಿಚಾರವನ್ನು ಪ್ರಾಣಿಪ್ರಿಯರು ಮುಖ್ಯ ನ್ಯಾಯಮೂರ್ತಿಗಳ  ಗಮನಕ್ಕೆ ತಂದಿದ್ದರು.

ಬುಧವಾರ ತಮ್ಮ ಸಹೋದ್ಯೋಗಿ ನ್ಯಾಯಮೂರ್ತಿಗಳ ಆದೇಶದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ನ್ಯಾಯಮೂರ್ತಿ ಬಿ.ಆರ್‌. ಗವಾಯಿ ಅವರು , ಆದೇಶವನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದರು.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಜೆ.ಡಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ನೇತೃತ್ವದ ಸುಪ್ರೀಂ ಪೀಠವು ಸೋಮವಾರ ನೀಡಿದ ತೀರ್ಪಿನಲ್ಲಿ ಬೀದಿ ನಾಯಿಗಳಿಂದ ಬೀದಿಗಳನ್ನು ಸಂಪೂರ್ಣವಾಗಿ ಮುಕ್ತಗೊಳಿಸಬೇಕು ಎಂದು ಹೇಳಿತ್ತು. ನ್ಯಾಯಾಲಯದ ಈ ಆದೇಶವು ಪರ-ವಿರೋಧದ ಚರ್ಚೆಗೆ ಗ್ರಾಸವಾಗಿತ್ತು.

Tags:    

Similar News