ಬೆಂಗಳೂರು ಸಿಲಿಂಡರ್ ಸ್ಫೋಟ: ಮಹಿಳೆಯೊಬ್ಬರು ಸಾವು, ಮೂವರಿಗೆ ಗಾಯ

ಸ್ಫೋಟದ ತೀವ್ರತೆಯಿಂದ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.

Update: 2025-10-25 06:18 GMT

ಕೆ.ಆರ್. ಪುರಂನ ತ್ರಿವೇಣಿ ನಗರದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ ಬೃಹತ್ ಕಟ್ಟಡವೇ ಸಂಪೂರ್ಣವಾಗಿ ನೆಲಸಮಗೊಂಡಿದೆ.

Click the Play button to listen to article

ಬೆಂಗಳೂರಿನ ಕೆ.ಆರ್. ಪುರಂನ ತ್ರಿವೇಣಿ ನಗರದಲ್ಲಿ ಶನಿವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯೊಂದು ಕುಸಿದುಬಿದ್ದ ಪರಿಣಾಮ, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಮನೆಯ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಸ್ಥಳಕ್ಕೆ ತಕ್ಷಣವೇ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಕೆ.ಆರ್. ಪುರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಗುಲ್ಫಾರ್ಮ್ ಮತ್ತು ಸಿಮ್ರಾನ್ ತಾಜ್ ಮೃತಪಟ್ಟವರು 

 ಮೈಸೂರು: ಗೀಸರ್ ಗ್ಯಾಸ್ ಸೋರಿಕೆಗೆ ಅಕ್ಕ-ತಂಗಿ ಬಲಿ

ಮತ್ತೊಂದು ದುರಂತದಲ್ಲಿ, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಇಬ್ಬರು ಸಹೋದರಿಯರು ಮೃತಪಟ್ಟಿದ್ದಾರೆ. ಸ್ನಾನದ ಮನೆಯಲ್ಲಿದ್ದ ಗೀಸರ್‌ನಿಂದ ಗ್ಯಾಸ್ ಸೋರಿಕೆಯಾಗಿ ಉಸಿರುಗಟ್ಟಿ ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಸಾವನ್ನಪ್ಪಿದ್ದಾರೆ.

ಸ್ನಾನಕ್ಕೆಂದು ಹೋದವರು ಬಹಳ ಹೊತ್ತಾದರೂ ಹೊರಗೆ ಬಾರದಿದ್ದಾಗ, ಅವರ ತಂದೆ ಅಲ್ತಾಫ್ ಅವರು ಅನುಮಾನಗೊಂಡು ಬಾಗಿಲು ತೆರೆದು ನೋಡಿದ್ದಾರೆ. ಈ ವೇಳೆ ಇಬ್ಬರೂ ಮಕ್ಕಳು ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 

Tags:    

Similar News