Bangalore Gang Rape | ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ ಕ್ಯಾಟರಿಂಗ್‌ ಮಾಡಿಕೊಂಡಿದ್ದ ದೆಹಲಿ ಮೂಲದ ಮಹಿಳೆಯ ಮೇಲೆ ಶುಕ್ರವಾರ ರಾತ್ರಿ ಪಶ್ಚಿಮ ಬಂಗಾಳ ಹಾಗೂ ಉತ್ತರಾಖಂಡ ಮೂಲದ ನಾಲ್ವರು ಆರೋಪಿಗಳು ಅತ್ಯಾಚಾರ ಎಸಗಿದ್ದರು.;

Update: 2025-02-22 15:12 GMT
ಆರೋಪಿಗಳ ಬಂಧನ(ಪ್ರಾತಿನಿಧಿಕ ಚಿತ್ರ)

ಬೆಂಗಳೂರಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ನಾಲ್ವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

ನಗರದಲ್ಲಿ ಕ್ಯಾಟರಿಂಗ್‌ ಮಾಡಿಕೊಂಡಿದ್ದ ದೆಹಲಿ ಮೂಲದ ಮಹಿಳೆಯ ಮೇಲೆ ಶುಕ್ರವಾರ ರಾತ್ರಿ ಪಶ್ಚಿಮ ಬಂಗಾಳ ಹಾಗೂ ಉತ್ತರಾಖಂಡ ಮೂಲದ ನಾಲ್ವರು ಆರೋಪಿಗಳು ಅತ್ಯಾಚಾರ ಎಸಗಿದ್ದರು. 

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತನಿಖೆ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು 24ಗಂಟೆಗಳಲ್ಲೇ ಬಂಧಿಸಿದ್ದಾರೆ. ಬಂಧಿತರನ್ನು ಅಜಿತ್, ವಿಶ್ವ, ಶಿಭುಲ್ ಮತ್ತು ಶೋಭನ್ ಎಂದು ಗುರುತಿಸಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ.

ಗುರುವಾರ ರಾತ್ರಿ ತನ್ನ ಸ್ನೇಹಿತೆಯರನ್ನು ಭೇಟಿಯಾಗಲು ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜು ಬಳಿ ಜಂಕ್ಷನ್‌ನಲ್ಲಿ ಕಾಯುತ್ತಿದ್ದಾಗ ಸಮೀಪದ ಹೋಟೆಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಆಕೆಯ ಬಳಿ ಬಂದು ಹಿಂದಿಯಲ್ಲಿ ಆತ್ಮೀಯವಾಗಿ ಮಾತನಾಡಿಸಿದ್ದರು. ಊಟ ಕೊಡಿಸುವುದಾಗಿ ನಂಬಿಸಿ ಹೋಟೆಲ್‌ನ ಟೆರೆಸ್‌ಗೆ ಕರೆದೊಯ್ದ ಬಳಿಕ ಲೈಂಗಿಕ ಕಿರುಕುಳ ನೀಡಿದ್ದರು. ಆಕೆ ಪ್ರತಿರೋಧವನ್ನೂ ಲೆಕ್ಕಿಸದೇ ನಾಲ್ವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದರು. 

ಶುಕ್ರವಾರ ಮುಂಜಾನೆ ಆಕೆಯ ಬಳಿ ಇದ್ದ ಮೊಬೈಲ್‌ ಕಸಿದುಕೊಂಡು ಯಾರಿಗೂ ವಿಷಯ ತಿಳಿಸದಂತೆ ಬೆದರಿಸಿ ಬಿಟ್ಟು ಕಳುಹಿಸಿದ್ದರು. ಮನೆಗೆ ಬಂದ ಸಂತ್ರಸ್ಥೆ ಪತಿಗೆ ವಿಷಯ ತಿಳಿಸಿ, 112 ಸಹಾಯವಾಣಿಗೆ ಕರೆ ಮಾಡಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸಂತ್ರಸ್ಥೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಿದರು. ಸದ್ಯ ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Similar News