ಜಂಟಿ ಹೊಣೆಗಾರಿಕೆ ಗುಂಪುಗಳ ರಚನೆ; ಮಹಿಳೆಯರ ಆರ್ಥಿಕ ಶಕ್ತಿ ವೃದ್ಧಿಗೆ ಕ್ರಮ- ಲಕ್ಷ್ಮಿ ಹೆಬ್ಬಾಳ್ಕರ್‌

ಪ್ರಾಯೋಗಿಕವಾಗಿ ಸುಮಾರು 500 ಸಂಘಗಳನ್ನು ರಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜತೆಗೆ ಜಂಟಿ ಹೊಣೆಗಾರಿಗೆ ಗುಂಪುಗಳ ರಚನೆಗೆ ಅಂತಿಮ ರೂಪುರೇಷೆ ಸಿದ್ಧಪಡಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದರು.;

Update: 2025-07-30 13:43 GMT

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಭೆ ನಡೆಸಿದರು.

ಗೃಹಲಕ್ಷ್ಮಿ ಯೋಜನೆ ಈಗಾಗಲೇ ಜನಪ್ರಿಯಗೊಂಡಿದ್ದು, ಜಂಟಿ ಹೊಣೆಗಾರಿಗೆ ಗುಂಪುಗಳನ್ನು ರಚಿಸುವ ಮೂಲಕ ಮಹಿಳೆಯರಿಗೆ ಇನ್ನಷ್ಟು ಆರ್ಥಿಕ ಶಕ್ತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದರು. 

ಬೆಂಗಳೂರಿನ ವಿಧಾನಸೌಧದಲ್ಲಿ ಬುಧವಾರ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಬ್ಯಾಂಕ್‌ ಪ್ರತಿನಿಧಿಗಳ ಜತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಯೋಗಿಕವಾಗಿ ಸುಮಾರು 500 ಸಂಘಗಳನ್ನು ರಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜತೆಗೆ ಜಂಟಿ ಹೊಣೆಗಾರಿಗೆ ಗುಂಪುಗಳ ರಚನೆಗೆ ಅಂತಿಮ ರೂಪು ರೇಷೆ ಸಿದ್ಧಪಡಿಸುವಂತೆ ಹೇಳಿದರು.

ಕರ್ನಾಟಕದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭಗೊಂಡು 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಂದು ಸುವರ್ಣ ಮಹೋತ್ಸವ ಸಮಾರಂಭ ನಡೆಯಲಿದ್ದು, ಈ ವೇಳೆಗೆ ಜಂಟಿ ಹೊಣೆಗಾರಿಗೆ ಗುಂಪುಗಳ ರಚನೆಗೆ ಚಾಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

Tags:    

Similar News