Yadagiri News| ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ನೀರುಪಾಲು
ಯಾದಗಿರಿಯಲ್ಲಿ ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಬಾವಿಗೆ ಬಿದ್ದು ನೀರು ಪಾಲಾಗಿದ್ದಾರೆ. ಬೇಸಿಗೆ ರಜೆ ಇರುವುದರಿಂದ ಮಕ್ಕಳು ಕೆರೆ, ಕಾಲುವೆ, ನದಿಗಳಲ್ಲಿ ಈಜಲು ಹೋಗಿ ಮೃತಪಡುತ್ತಿರುವ ಘಟನೆಗಳು ಸಾಕಷ್ಟು ನಡೆಯುತ್ತಿದೆ. ಪೋಷಕರು ಈ ಬಗ್ಗೆ ಎಚ್ಚರ ವಹಿಸಬೇಕಾಗಿದೆ.;
By : The Federal
Update: 2025-05-16 07:10 GMT
ಸಾಂದರ್ಭಿಕ ಚಿತ್ರ
ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ಆಕಸ್ಮಿಕ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಮೊಟ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ವೈಶಾಲಿ (17) ಹಾಗೂ ನವೀತಾ (16) ಎಂದು ಗುರುತಿಸಲಾಗಿದೆ.
ಗ್ರಾಮಸ್ಥರು ಬಾಲಕಿಯರ ಮೃತದೇಹಗಳನ್ನು ಬಾವಿಯಿಂದ ಹೊರತೆಗೆದಿದ್ದಾರೆ. ಪೋಷಕರ ಆಕ್ರಂಧನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ರಾಜ್ಯಾದ್ಯಂತ ಬೇಸಿಗೆ ರಜೆ ಇರುವುದರಿಂದ ಶಾಲಾ ಮಕ್ಕಳು ಕೃಷಿ ಹೊಂಡ, ನದಿ ತೀರಗಳು ಹಾಗೂ ಕೆರೆಗಳಲ್ಲಿ ಈಜಲು ಮತ್ತು ಬಟ್ಟೆ ತೊಳೆಯಲು ಹೋದಾಗ ಇಂತಹ ದುರ್ಘಟನೆಗಳು ನಡೆಯುತ್ತಿವೆ. ಪೋಷಕರು ಹಾಗೂ ಮಕ್ಕಳು ಈ ಬಗ್ಗೆ ಎಚ್ಚರ ವಹಿಸುವುದು ಅಗತ್ಯವಾಗಿದೆ. ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.