ಬಾಲಕಿ ಸೇರಿ ಎಂಟು ಮಹಿಳೆಯರಿಗೆ ಲೈಂಗಿಕ ಕಿರುಕುಳ; ಯೋಗಗುರು ಬಂಧನ
ಯೋಗದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿಸುತ್ತೇನೆ, ಸರ್ಕಾರಿ ಉದ್ಯೋಗ ದೊರಕುವಂತೆ ಸಹಾಯ ಮಾಡುತ್ತೇನೆ" ಎಂದು ನಂಬಿಸಿ, ಯೋಗ ಕಲಿಯಲು ಬರುತ್ತಿದ್ದ ಯುವತಿಯರು ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ.;
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಬಾಲಕಿ ಸೇರಿದಂತೆ ಎಂಟು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸರು ಯೋಗ ಶಿಕ್ಷಕನನ್ನು ಬಂಧಿಸಿದ್ದಾರೆ.
ನಿರಂಜನಾ ಮೂರ್ತಿ ಬಂಧಿತ ಆರೋಪಿ. 17 ವರ್ಷದ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಘಟನೆ ಹಿನ್ನಲೆ
ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ ನಿರಂಜನಾ ಮೂರ್ತಿ, "ಯೋಗದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿಸುತ್ತೇನೆ, ಸರ್ಕಾರಿ ಉದ್ಯೋಗ ದೊರಕುವಂತೆ ಸಹಾಯ ಮಾಡುತ್ತೇನೆ" ಎಂದು ನಂಬಿಸಿ, ಯೋಗ ಕಲಿಯಲು ಬರುತ್ತಿದ್ದ ಯುವತಿಯರು ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ.
ಬಾಲಕಿಯು ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದ. ಬಳಿಕ ಆತನನ್ನುಪತ್ತೆ ಮಾಡಿ ಬಂಧಿಸಲಾಗಿದೆ.
ತನಿಖೆ ವೇಳೆ ಇನ್ನಷ್ಟು ಮಹಿಳೆಯರು ನಿರಂಜನಾ ಮೂರ್ತಿಯಿಂದ ದೌರ್ಜನ್ಯಕ್ಕೊಳಗಾಗಿರುವುದು ಬೆಳಕಿಗೆ ಬಂದಿದೆ.
ಪೊಲೀಸರು ಆರೋಪಿ ವಿರುದ್ಧ ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ಇನ್ನೂ ಹಲವು ಬಾಧಿತರು ಮುಂದೆ ಬರುವ ಸಾಧ್ಯತೆಯಿದೆ. ದೂರು ನೀಡುವವರ ಮಾಹಿತಿಯನ್ನು ಸಂಪೂರ್ಣ ಗೌಪ್ಯವಾಗಿರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.