ಅಹಮದಾಬಾದ್ನಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಶುಕ್ರವಾರ) ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ, ಅಲ್ಲಿಂದ ಕಾರಿನಲ್ಲಿ ಅಪಘಾತ ಸಂಭವಿಸಿದ ಮೇಘನಿನಗರ ಪ್ರದೇಶಕ್ಕೆ ತೆರಳಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಪ್ರಧಾನಿಯವರೊಂದಿಗೆ ಇದ್ದರು. ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತುಕೊಂಡು ಗುರುವಾರ ಮಧ್ಯಾಹ್ನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು. ಈ ದುರಂತದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಕನಿಷ್ಠ 265 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.