ವಿಶ್ವ ವಿಖ್ಯಾತ ತಿರುಪತಿಯ ತಿರುಮಲ ದೇವಸ್ಥಾನದಲ್ಲಿ ಬುಧವಾರ ರಾತ್ರಿ ‘ವೈಕುಂಠ ದ್ವಾರ ದರ್ಶನ’ದ ಟೋಕನ್ ಪಡೆದುಕೊಳ್ಳುವ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದ್ದು, ಆರು ಮಂದಿ ಭಕ್ತರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಂಪಿನಲ್ಲಿ ಸಿಲುಕಿದ್ದ ಮಳೆಯೊಬ್ಬರನ್ನು ರಕ್ಷಿಸಲು ಗೇಟ್ ತೆರೆದಿದ್ದೇ ಘಟನೆಗೆ ಕಾರಣ ಎಂದು ಮೂಲಗಳು ತಿಳಿಸಿವೆ. ನೂಕುನುಗ್ಗಲಿನಿಂದ 150ಕ್ಕೂ ಅಧಿಕ ಭಕ್ತರು ಗಾಯಗೊಂಡಿದ್ದಾರೆ. ವಿಶೇಷ ದರ್ಶನಕ್ಕಾಗಿ ಟೋಕನ್ ಪಡೆಯಲು 4,000 ಕ್ಕೂ ಹೆಚ್ಚು ಭಕ್ತರ ಗುಂಪು ಸಾಲುಗಟ್ಟಿ ನಿಂತಿದ್ದರಿಂದ ಭಾರಿ ಗೊಂದಲ ಮತ್ತು ಕೋಲಾಹಲಕ್ಕೆ ಕಾರಣವಾಯಿತು. ಜನದಟ್ಟಣೆ ಮತ್ತು ಆಡಳಿತದ ಲೋಪದಿಂದಾಗಿ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮಾಹಿತಿಯ ಪ್ರಕಾರ, ಬೈರಾಗಿ ಪಟ್ಟಿಡಾ ಪಾರ್ಕ್ನ ಟೋಕನ್ ಕೌಂಟರ್ಗಳಲ್ಲಿ ಸರತಿ ಸಾಲಿನಲ್ಲಿ ಕಾಯುತ್ತಿದ್ದ ಆರು ಬಲಿಪಶುಗಳಲ್ಲಿ ಒಬ್ಬರಾದ ಮಲ್ಲಿಕಾ ಎಂಬುವರು ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾದರು. ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲು ಗೇಟ್ ಗಳನ್ನು ತೆರೆಯಲಾಗಿತ್ತು. ಈ ವೇಳೆ ಏಕಾಏಕಿ ಸಾವಿರಾರು ಮಂದಿ ನುಗ್ಗಿದ್ದ ಕಾರಣ ದುರ್ಘಟನೆ ಸಂಭವಿಸಿದೆ.