Republic day 2025: ದೆಹಲಿಯ ಬಾನಲ್ಲಿ ಅಬ್ಬರಿಸಿದ ಭಾರತದ ಯುದ್ಧ ವಿಮಾನಗಳು
ದೆಹಲಿಯ ಕರ್ತವ್ಯಪಥದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗಣರಾಜ್ಯೋತ್ಸವ ಧ್ರಜಾರೋಹಣ ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಇದಾದ ಬಳಿಕ ಆಕರ್ಷಕ ಪಥಸಂಚಲನ ಆರಂಭಗೊಂಡಿತು.
ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಆಧರಿಸಿದ ನಮ್ಮ ಸಂವಿಧಾನವು ಭಾರತೀಯ ಗಣರಾಜ್ಯದ ಹೆಮ್ಮೆಯಾಗಿದೆ. ಅದನ್ನು ಗೌರವಿಸುವುದು ಮತ್ತು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ನನ್ನ ಪ್ರೀತಿಯ ನಾಗರಿಕರಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪರವಾಗಿ ನಾನು ಗಣರಾಜ್ಯೋತ್ಸವದ ಶುಭಾಶಯ ತಿಳಿಸುತ್ತೇನೆ.ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶದ ಜನರಿಗೆ ಶುಭಾಶಯ ತಿಳಿಸಿದ್ದಾರೆ.
ಇಂದು ನಾವು ಗಣರಾಜ್ಯವಾಗಿ 76 ಅದ್ಭುತ ವರ್ಷಗಳನ್ನು ಆಚರಿಸುತ್ತಿದ್ದೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ನಮ್ಮ ಪ್ರಯಾಣ ಬೇರೂರಿದೆ ಎಂದು ಖಚಿತಪಡಿಸಿದ ಎಲ್ಲ ಮಹಾನ್ ಮಹಿಳೆಯರು ಮತ್ತು ಪುರುಷರಿಗೆ ನಾವು ನಮಸ್ಕರಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.
ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ‘ಗಣರಾಜ್ಯೋತ್ಸವವು ಎಲ್ಲಾ ನಾಗರಿಕರಿಗೆ ಸಾಮೂಹಿಕ ಸಂತೋಷ ಮತ್ತು ಹೆಮ್ಮೆಯ ವಿಷಯವಾಗಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ನಮ್ಮ ಗಡಿಯನ್ನು ಕಾವಲು ಕಾಯುತ್ತಿರುವ ಯೋಧರಿಗೆ ಹಾಗೂ ಗಡಿಯೊಳಗೆ ಸುರಕ್ಷಿತವಾಗಿರಿಸುವ ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿಗೆ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ದೇಶದಾದ್ಯಂತ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ದೇಶದ ಜನರಿಗೆ ಶುಭಾಶಯ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 76ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಇಂಡೋನೇಷ್ಯಾದ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರನ್ನು ಕರ್ತವ್ಯ ಪಥಕ್ಕೆ ಬರಮಾಡಿಕೊಂಡರು. ಅಧ್ಯಕ್ಷ ಸುಬಿಯಾಂಟೊ ಈ ವರ್ಷದ ಮುಖ್ಯ ಅತಿಥಿಯಾಗಿ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ.