ಬೆಂಗಳೂರಿನಲ್ಲಿ ಡೆಂಗ್ಯೂಗೆ ಬಾಲಕ ಬಲಿ

ರಾಜ್ಯದಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿ ಹರಡುತ್ತಿದ್ದು, ಡೆಂಗ್ಯು ಜ್ವರದಿಂದ ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಸಂದರ್ಭದಲ್ಲಿ ಯಾವ ರೀತಿ ಉಚಿತ ಚಿಕಿತ್ಸೆ ನೀಡಲಾಯಿತೋ ಅದೇ ರೀತಿ ಕನಿಷ್ಠ ಮಾನದಂಡದಲ್ಲಿ ಉಚಿತ ಚಿಕಿತ್ಸೆ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಸಂಸದ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿ.ಎನ್‌. ಮಂಜುನಾಥ್‌ ಹೇಳಿದ್ದಾರೆ.

Update: 2024-07-06 08:31 GMT
ಡೆಂಗ್ಯೂ ಜ್ವರಕ್ಕೆ ಬೆಂಗಳೂರಿನಲ್ಲಿ ಬಾಲಕ ಬಲಿಯಾಗಿದ್ದಾನೆ.

ರಾಜ್ಯದಲ್ಲಿ ಡೆಂಗ್ಯೂ ಜ್ವರ ಉಲ್ಬಣಗೊಂಡಿದ್ದು, ಇದೀಗ ಬೆಂಗಳೂರಿನಲ್ಲಿ ಬಾಲಕನೊಬ್ಬ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾನೆ.

ಅಂಜನಾಪುರದ 11 ವರ್ಷದ ಬಾಲಕ ಗಗನ್ ಶುಕ್ರವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಬಾಲಕ ಗಗನ್ ಕೆಲ ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ. ನಿನ್ನೆ ತಡರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇದು ಬೆಂಗಳೂರಿನದಲ್ಲಿ ಡೆಂಗ್ಯೂ ಜ್ವರಕ್ಕೆ ಬಲಿಯಾದ ಎರಡನೇ ಪ್ರಕರಣವಾಗಿದೆ. ಕಳೆದ ವಾರ ಕಗ್ಗದಾಸಪುರದಲ್ಲಿ 27 ವರ್ಷ ಯುವಕ ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದ್ದಾರೆ.

ಹಾಸನದಲ್ಲಿ ಡೆಂಗ್ಯೂ ಅಟ್ಟಹಾಸ

ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿ ಅಟ್ಟಹಾಸ ಮೆರೆದಿದ್ದು, ಒಂದೇ ವಾರದಲ್ಲಿ ನಾಲ್ವರು ಮಕ್ಕಳು ಬಲಿಯಾಗಿದ್ದಾರೆ. ಜೂನ್ 30 ರಂದು ಹೊಳೆನರಸೀಪುರದ 8 ವರ್ಷದ ವರ್ಷಿಕಾ, ಜುಲೈ 1 ರಂದು ಅರಕಲಗೂಡಿನ 13 ವರ್ಷದ ಅಕ್ಷತಾ, ಜುಲೈ 3 ರಂದು ಗುಡೇನಹಳ್ಳಿಯ 11 ವರ್ಷದ ಕಲಾಶ್ರೀ ಮತ್ತು ಜುಲೈ 5 ರಂದು 8 ವರ್ಷದ ಸಮೃದ್ಧಿ ಹೊಳೆನರಸೀಪುರದವರಾಗಿದ್ದು ಅವರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಏಳು ಮಂದಿ ರಾಜ್ಯದಲ್ಲಿ ಇದುವರೆಗೆ ಡೆಂಗ್ಯುವಿನಿಂದ ಸಾವಿಗೀಡಾಗಿದ್ದಾರೆ ಎಂದು ಲೆಕ್ಕ ಹಾಕಲಾಗಿದೆ. ಕೆಲವು ಶಂಕಿತ ಡೆಂಗ್ಯು ಸಾವಿನ ಪ್ರಕರಣಗಳಿದ್ದು, ಅವು ಖಚಿತಗೊಳ್ಳಬೇಕಿವೆ.

ಉಚಿತ ಚಿಕಿತ್ಸೆ ನೀಡಲು ಸಂಸದ ಡಾ ಮಂಜುನಾಥ್ ಒತ್ತಾಯ

ಇನ್ನು ರಾಜ್ಯದಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿ ಹರಡುತ್ತಿದ್ದು, ಡೆಂಗ್ಯು ಜ್ವರದಿಂದ ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಸಂದರ್ಭದಲ್ಲಿ ಯಾವ ರೀತಿ ಉಚಿತ ಚಿಕಿತ್ಸೆ ನೀಡಲಾಯಿತೋ ಅದೇ ರೀತಿ ಕನಿಷ್ಠ ಮಾನದಂಡದಲ್ಲಿ ಉಚಿತ ಚಿಕಿತ್ಸೆ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿಎನ್‌ ಮಂಜುನಾಥ್‌ ಹೇಳಿದ್ದಾರೆ.

ಇದು ಸರ್ಕಾರಕ್ಕೆ ನನ್ನ ಸಲಹೆ. ಡೆಂಗ್ಯೂ ಜ್ವರ ನಿಯಂತ್ರಣ ಅಂದರೆ ಸೊಳ್ಳೆ ನಿಯಂತ್ರಣ. ಸೊಳ್ಳೆ ನಿಯಂತ್ರಣ ಆದರೆ ಮಾತ್ರ ಡೆಂಗ್ಯು ನಿಯಂತ್ರಣ ಆಗಲಿದೆ. ಮಳೆಗಾಲ ಪ್ರಾರಂಭದಲ್ಲಿ ಸೊಳ್ಳೆಯಿಂದ ಹರಡುವ ಕಾಯಿಲೆ ಬರುತ್ತದೆ. ಡೆಂಗ್ಯು ತಡೆಗಟ್ಟದಿದ್ದರೆ ಚಿಕನ್ ಗುನ್ಯ,ಝೀಕಾ ವೈರಸ್ ಬರಬಹುದು. ಕೋವಿಡ್ ಪ್ಯಾಂಡಮಿಕ್ ಅಂದೆವು. ಡೆಂಗ್ಯೂ ಎಂಡಮಿಕ್ ಆಗಿದೆ. ಪ್ಯಾಂಡಮಿಕ್ ಅಂದರೆ ರಾಜ್ಯಾದ್ಯಂತ ಹರಡಿರೋದು. ಇದಕ್ಕೆ ತುರ್ತು ಚಿಕಿತ್ಸೆ ಅಗತ್ಯವಿದೆ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು ಎಂದು ಮಂಜುನಾಥ್‌ ಹೇಳಿದ್ದಾರೆ.

Tags:    

Similar News