Actor Darshan Case | ದರ್ಶನ್‌ ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಭಾವನಾತ್ಮಕ ಸಂದೇಶ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನವಾಗಿದೆ. ಆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮನಬಂದಂತೆ ಪ್ರತಿಕ್ರಿಯಿಸುತ್ತಿರುವ ದರ್ಶನ್‌ ಅಭಿಮಾನಿಗಳಿಗೆ ನಟನ ಪತ್ನಿ ವಿಜಯಲಕ್ಷ್ಮಿ ವಿಶೇಷ ಮನವಿ ಮಾಡಿದ್ದಾರೆ.;

Update: 2024-06-27 07:14 GMT
ನಟ ದರ್ಶನ್‌ ಹಾಗೂ ಪತ್ನಿ ವಿಜಯಲಕ್ಷ್ಮೀ
Click the Play button to listen to article

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್‌ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮನಬಂದಂತೆ ಪ್ರತಿಕ್ರಿಯಿಸುತ್ತಿರುವ ಹಿನ್ನೆಲೆಯಲ್ಲಿ ನಟನ ಪತ್ನಿ ವಿಜಯಲಕ್ಷ್ಮಿ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಪೋಸ್ಟ್ ಮೂಲಕ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.

ಇತ್ತೀಚೆಗೆ ವಿಜಯಲಕ್ಷ್ಮಿ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ದರ್ಶನ್ ಭೇಟಿ ಮಾಡಿ ಬಂದಿದ್ದರು. ಈ ವೇಳೆ ಪುತ್ರ ವಿನೀಶ್ ಕೂಡ ಜೊತೆಗಿದ್ದ.

ಪೋಸ್ಟ್‌ನಲ್ಲಿ ಏನಿದೆ?

"ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ "ಸೆಲೆಬ್ರಿಟಿಗಳನ್ನು" ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ" "ಇದೊಂದು ಪರೀಕ್ಷೆಯ ಸಮಯ; ನನಗೆ,ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಬಗ್ಗೆ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ".

Full View

"ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ. ಸತ್ಯಮೇವ ಜಯತೆ" ಎಂದು ಪೋಸ್ಟ್ ಮಾಡಿದ್ದಾರೆ.

Tags:    

Similar News