Dengue Outbreak | ಡೆಂಗ್ಯೂ ಜ್ವರಕ್ಕೆ ಮೈಸೂರಿನಲ್ಲಿ ಮತ್ತೊಂದು ಬಲಿ

ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಮುಂದುವರೆದಿದ್ದು, ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಇನ್ನೊಂದು ಬಲಿಯಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಲಲಿತಾ ಮೃತಪಟ್ಟವರು.

Update: 2024-07-07 13:02 GMT
ಡೆಂಗ್ಯೂ ಜ್ವರಕ್ಕೆ ಮೈಸೂರಿನಲ್ಲಿ ಮತ್ತೊಂದು ಬಲಿಯಾಗಿದೆ.

ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಮುಂದುವರಿದಿದ್ದು, ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಇನ್ನೊಂದು ಬಲಿಯಾಗಿದೆ.

ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಲಲಿತಾ ಮೃತಪಟ್ಟವರು. ಮೂರು ದಿನಗಳ ಹಿಂದೆ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟ ಬೆನ್ನಲ್ಲೇ ಇದೀಗ ಮತ್ತೊಬ್ಬರು ಡೆಂಗ್ಯೂ ಜ್ವರದಿಂದ ಸಾವಿಗೀಡಾಗಿದ್ದಾರೆ.

3 ದಿನಗಳ ಹಿಂದೆ ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿತ್ತು. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ (32) ಮೃತ ಮೃತಪಟ್ಟಿದ್ದರು.

ರಾಜ್ಯದಲ್ಲಿ ಇದುವರೆಗೆ 53,866 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ 7006 ಮಂದಿಯಲ್ಲಿ ರೋಗ ದೃಢಪಟ್ಟಿದೆ. 352 ಸಕ್ರಿಯ ಪ್ರಕರಣಗಳಿದ್ದು, 7 ಮಂದಿ ಡೆಂಗ್ಯೂಗೆ ಬಲಿಯಾಗಿದ್ದಾರೆ.

Tags:    

Similar News