ಚಿಕ್ಕೋಡಿ | ವಿಜಯೋತ್ಸವದಲ್ಲಿ ಪಾಕ್‌ ಪರ ಘೋಷಣೆ: ಕಿಡಿಗೇಡಿಯ ಬಂಧನ

ಕಾಂಗ್ರೆಸ್‌ ಸಂಭ್ರಮಾಚರಣೆಯಲ್ಲಿ ಕಿಡಿಗೇಡಿಯೊಬ್ಬ ಪಾಕ್ ಪರ ಘೋಷಣೆ ಕೂಗಿರುವ ಘಟನೆ ಚಿಕ್ಕೋಡಿಯ ಮತ ಎಣಿಕೆ ಕೇಂದ್ರದ ಹೊರವಲಯದಲ್ಲಿ ನಡೆದಿದೆ.;

Update: 2024-06-04 14:41 GMT
ಕಿಡಿಗೇಡಿಯೊಬ್ಬ ಪಾಕ್ ಪರ ಘೋಷಣೆ ಕೂಗಿರುವ ಘಟನೆ ಚಿಕ್ಕೋಡಿಯ ಮತ ಎಣಿಕೆ ಕೇಂದ್ರದ ಹೊರವಲಯದಲ್ಲಿ ನಡೆದಿದೆ.
Click the Play button to listen to article

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ನ ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವಿನ ಸಂಭ್ರಮಾಚರಣೆ ವೇಳೆ ಕಿಡಿಗೇಡಿಯೊಬ್ಬ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿರುವ ಘಟನೆ ಮತ ಎಣಿಕೆ ಕೇಂದ್ರದ ಹೊರವಲಯದಲ್ಲಿ ನಡೆದಿದೆ. ಘೋಷಣೆ ಕೂಗಿದ ಜಮೀರ್ ನಾಯಿಕವಾಡಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

'ಪಾಕಿಸ್ತಾನ್ ಜಿಂದಾಬಾದ್' ಎಂಬ ಘೋಷಣೆ ಕೂಗಿದ ಜಮೀರ್ ನಾಯ್ಕವಾಡಿ(26) ಎಂಬಾತನನ್ನು ವಶಕ್ಕೆ ಪಡೆದಿದ್ದೇವೆ. ಕಾನೂನು ಪ್ರಕಾರ ಕ್ರಮ ಜರುಗಿಸಿದ್ದೇವೆ' ಎಂದು ಬೆಳಗಾವಿ  ಎಸ್ಪಿ ಭೀಮಾಶಂಕರ ಗುಳೇದ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ಹಿಂದೆ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಾಗ ವಿಧಾನಸೌಧದಲ್ಲೇ ಕಾಂಗ್ರೆಸ್‌ ನೂತನ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನದ ಪರ ಜೈಕಾರ ಕೂಗಿದ್ದರು. ಇದಕ್ಕೆ ರಾಜ್ಯಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದ್ದವು. ಇದರ ಬೆನ್ನಲ್ಲೇ ಇದೀಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದಾರೆ.

ಇನ್ನೂ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ, ಬಿಜೆಪಿ ಅಭ್ಯರ್ಥಿ ಅಣ್ಣಸಾಹೇಬ್ ಜೊಲ್ಲೆ ವಿರುದ್ಧ 96,253 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 6,80,179 ಮತ ಗಳಿಸಿದರೆ, ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ 5,83,926 ಮತ ಪಡೆದು ಸೋಲು ಕಂಡಿದ್ದಾರೆ.

Tags:    

Similar News