ಸರ್ಕಾರಿ ಶಾಲೆ ಇಂಗ್ಲೀಷ್ ಮಾಧ್ಯಮ ವಾಪಾಸ್: ಸಿ.ಎಂ ಸಿದ್ದರಾಮಯ್ಯ ಭರವಸೆ
ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ವಾಪಾಸ್ ಪಡೆಯುವ ಬಗ್ಗೆ ಗಂಭೀರ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
By : The Federal
Update: 2024-03-02 07:11 GMT
ಮೈಸೂರು: ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ವಾಪಾಸ್ ಪಡೆಯುವ ಬಗ್ಗೆ ಗಂಭೀರ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಮೈಸೂರಿನ ಕಲಾಮಂದಿರದಲ್ಲಿ ನಡೆದ ಪ.ಮಲ್ಲೇಶ್-90 ಸ್ಮರಣಾರ್ಥ ನಡೆಯುತ್ತಿರುವ ವಿಚಾರಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಡಿಸಿಎಂ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಐದನೇ ತರಗತಿಯವರೆಗೂ ಇಂಗ್ಲೀಷ್ ಮಾಧ್ಯಮ ಆರಂಭಿಸಬೇಕು ಎಂದಿದ್ದಾರೆ. ಅದನ್ನು ತಪ್ಪಿಸಬೇಕು ಎಂದು ಕನ್ನಡ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿ ಸ.ರ.ಸುದರ್ಶನ್ ಹೇಳಿದರು.
ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಮಲ್ಲೇಶ್ ಅವರು ಕನ್ನಡ ಮಾಧ್ಯಮದ ಬಗ್ಗೆ ಹೊಂದಿದ್ದ ಬದ್ಧತೆ ಎಲ್ಲರಿಗೂ ಗೊತ್ತಿದೆ. ಒತ್ತಾಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಮವಹಿಸುವೆ ಎಂದರು.