ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಆ್ಯಂಡ್ ಗ್ಯಾಂಗ್ ವಿಚಾರಣೆ

ಪೊಲೀಸ್ ಕಸ್ಟಡಿ ಅಗತ್ಯವಿರದ ಹಿನ್ನಲೆಯಲ್ಲಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಇಂದು(ಜು.4) ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಜೈಲು ಸಿಬ್ಬಂದಿ ಹಾಜರುಪಡಿಸಲಿದ್ದಾರೆ.

Update: 2024-07-04 08:09 GMT
ದರ್ಶನ್‌ ಮತ್ತು ಟೀಂ ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ಎದುರಿಸಲಿದ್ದಾರೆ.
Click the Play button to listen to article

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಹಾಗೂ ಆತನ ಸಹಚರರ ನ್ಯಾಯಾಂಗ ಬಂಧನ ಗುರುವಾರ (ಜುಲೈ 4) ಕೊನೆಗೊಳ್ಳಲಿದ್ದು, ದರ್ಶನ್ ಹಾಗೂ ಅವರ ಟೀಂ ಕೋರ್ಟ್​ಗೆ ಹಾಜರಾಗಬೇಕಿತ್ತು. ಆದರೆ, ದರ್ಶನ್ ನೇರವಾಗಿ ಕೋರ್ಟ್​ಗೆ ಬರುತ್ತಿಲ್ಲ, ಬದಲಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಎದುರಿಸಲಿದ್ದಾರೆ.

ಪೊಲೀಸ್ ಕಸ್ಟಡಿ ಅಗತ್ಯವಿರದ ಹಿನ್ನಲೆಯಲ್ಲಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಜೈಲು ಸಿಬ್ಬಂದಿ ಆರೋಪಿಗಳನ್ನು ಹಾಜರುಪಡಿಸಲಿದ್ದಾರೆ.

ಈ ಬಗ್ಗೆ ಪವಿತ್ರಾ ಗೌಡ ಪರ ವಕೀಲರು ಮಾಹಿತಿ ನೀಡಿದ್ದಾರೆ. ‘ಇಂದು ವಿಚಾರಣೆಗೆ ನ್ಯಾಯಾಲಯಕ್ಕೆ ಆರೋಪಿಗಳು ಹಾಜರಾಗುವುದಿಲ್ಲ. ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದೆ’ ಎಂದಿದ್ದಾರೆ.

ದರ್ಶನ್‌ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಎಂಬ ಕಾರಣಕ್ಕಾಗಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆ ತಂದ ದರ್ಶನ್‌ ಮತ್ತು ಗ್ಯಾಂಗ್‌ ಆತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎಂಬ ಆರೋಪ ದರ್ಶನ್‌ ಮತ್ತು ಟೀಂ ಮೇಲಿದೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ.

Tags:    

Similar News