POCSO Case| ಸಿಐಡಿ ಮುಂದೆ ಹಾಜರಾಗಲಿರುವ ಬಿ.ಎಸ್ ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ ಇಂದು ಸಿಐಡಿ ಮುಂದೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ.;
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ ಇಂದು ಸಿಐಡಿ ಮುಂದೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ.
ಇಂದು ಬೆಂಗಳೂರಿನಲ್ಲಿರುವ ಸಿಐಡಿ ಮುಖ್ಯ ಕಚೇರಿಯಲ್ಲಿ ಬಿಎಸ್‌ವೈ ತಮ್ಮ ವಕೀಲರ ಸಮೇತ ಹಾಜರಾಗಿ ವಿಚಾರಣೆ ಎದುರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಯಡಿಯೂರಪ್ಪ ಅಪ್ರಾಪ್ತ ವಯಸ್ಸಿನ ಹುಡುಗಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಬಾಲಕಿಯ ತಾಯಿ ಈ ಆರೋಪ ಮಾಡಿದ್ದು, ಈಕೆ ಇತ್ತೀಚೆಗೆ ನಿಧನರಾಗಿದ್ದರು. ಪ್ರಕರಣ ನಡೆದ ಸಂದರ್ಭದಲ್ಲಿ ಯಾರೆಲ್ಲ ಬಂದಿದ್ದರು, ಅಂದು ಏನಾಯಿತು ಇತ್ಯಾದಿ ಪ್ರಕರಣದ ಮಾಹಿತಿಯನ್ನು ಬಿಎಸ್‌ವೈ ಅವರಿಂದ ಸಿಐಡಿ ಪಡೆಯಲಿದೆ.
ಬಂಧನದ ಭೀತಿಯಲ್ಲಿದ್ದ ಬಿಎಸ್‌ವೈ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿತ್ತು. ಹೈಕೋರ್ಟ್‌ನ ಮುಂದಿನ ವಿಚಾರಣೆವರೆಗೆ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಆದೇಶ ಹೊರಡಿಸಿತ್ತು. ಇದರಿಂದಾಗಿ, ಸಿಐಡಿ ಅಧಿಕಾರಿಗಳಿಂದ ಬಂಧನದ ಭೀತಿಯಲ್ಲಿ ಯಡಿಯೂರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ. ಆದರೆ, ಜೂನ್ 17ರಂದು ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಬೇಕು ಎಂದು ಯಡಿಯೂರಪ್ಪ ಅವರಿಗೆ ಕೋರ್ಟ್ ಸೂಚಿಸಿತ್ತು.
ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು.