ಬೆಂಗಳೂರು: ರಾಜ್ಯದ ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆಗೆ ಗುರುವಾರ ( ಮಾರ್ಚ್ 28) ರಂದು ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನ 29 ನಾಮಪತ್ರ ಸಲ್ಲಿಕೆಯಾಗಿದೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಆರು ಹಾಗೂ ಉಡುಪಿ- ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿದೆ.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಏಳು, ಬಿಜೆಪಿ, ಜೆಡಿಎಸ್ ಕಾಂಗ್ರಸ್‌ನ ತಲಾ ಒಬ್ಬರು ಹಾಗೂ ಏಳು ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.