ಸೆಂಥಿಲ್ ಬಾಲಾಜಿ ಜಾಮೀನು ಅರ್ಜಿಯನ್ನು ಮತ್ತೆ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅವರ ಬಂಧನವನ್ನು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್ ನ (ಜುಲೈ 14) ಆದೇಶವನ್ನು ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಮತ್ತು ಪತ್ನಿ ಮೇಗಾಲಾ ಪ್ರಶ್ನಿಸಿದ್ದಾರೆ;
ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಇಡಿಯಿಂದ ಬಂಧನಕ್ಕೊಳಗಾಗಿದ್ದ ತಮಿಳುನಾಡು ಮಾಜಿ ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಸಲ್ಲಿಸಿದ್ದ ಎರಡನೇ ಜಾಮೀನು ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ
ಡಿಎಂಕೆ ನಾಯಕನ ಜಾಮೀನು ಅರ್ಜಿ ಮನವಿಯನ್ನು ನಾಲ್ಕು ತಿಂಗಳಲ್ಲಿ ಇದು ಎರಡನೇ ಬಾರಿ ಹೈಕೋರ್ಟ್ ತಿರಸ್ಕರಿಸಿದೆ. ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಆನಂದ ವೆಂಕಟೇಶ್ ವಜಾಗೊಳಿಸಿದ್ದಾರೆ. ಜೂನ್ 14, 2023 ರಂದು ಬಂಧಿಸಲ್ಪಟ್ಟ ಎಂಟು ತಿಂಗಳ ನಂತರ, ಸೆಂಥಿಲ್ ಬಾಲಾಜಿ ಫೆಬ್ರವರಿ 13 ರಂದು ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದರು.
ಜಾರಿ ನಿರ್ದೇಶನಾಲಯ (ಇಡಿ)ದ ಪ್ರಕಾರ, ವಿ ಸೆಂಥಿಲ್ ಬಾಲಾಜಿ ಅವರು ರೂ.67.74 ಕೋಟಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಹೇಳಲಾಗಿದೆ. "ಈ ರೀತಿಯ ಪ್ರಕರಣದಲ್ಲಿ ಅರ್ಜಿದಾರರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ, ಅದು ತಪ್ಪು ಸಂದೇಶ ಕಳುಹಿಸಿದಂತಾಗುತ್ತದೆ ಮತ್ತು ಅದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿರುತ್ತದೆ. ಆದ್ದರಿಂದ, ನ್ಯಾಯಾಲಯವು ಸೆಕ್ಷನ್ 439 Cr.PC ಅಡಿಯಲ್ಲಿ ಅರ್ಜಿದಾರರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತದೆ ಎಂದು ನ್ಯಾಯಾಧೀಶರು ಹೇಳಿದರು.
ಅರ್ಜಿದಾರರು ಎಂಟು ತಿಂಗಳಿಗೂ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ್ದಾರೆ ಆದ್ದರಿಂದ ಕಾಲಮಿತಿಯೊಳಗೆ ಪ್ರಕರಣವನ್ನು ಇತ್ಯರ್ಥಪಡಿಸುವಂತೆ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡುವುದು ಸೂಕ್ತ ಎಂದು ನ್ಯಾಯಾಧೀಶರು ಹೇಳಿದರು. ಅದರಂತೆ, ಈ ಆದೇಶದ ಪ್ರತಿಯನ್ನು ಸ್ವೀಕರಿಸಿದ ದಿನಾಂಕದಿಂದ ಮೂರು ತಿಂಗಳ ಅವಧಿಯಲ್ಲಿ ಪ್ರಕರಣವನ್ನು ವಿಲೇವಾರಿ ಮಾಡಲು ಚೆನ್ನೈನ ಪ್ರಧಾನ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನವಿರುತ್ತದೆ.
ವಿನೋದ್ ಕುಮಾರ್ Vs ಸ್ಟೇಟ್ ಆಫ್ ಪಂಜಾಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳಿಗೆ ಅನುಗುಣವಾಗಿ ವಿಚಾರಣೆಯನ್ನು ದಿನಂಪ್ರತಿ ನಡೆಸಲಾಗುವುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.