ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ | ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಅರೆಸ್ಟ್
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾದ ಬೆನ್ನಲ್ಲೇ ಅವರ ಕಾರು ಚಾಲಕ ಅಜಿತ್ನನ್ನು ಎಸ್‌ಐಟಿ ಬಂಧಿಸಿದೆ.;
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ನನ್ನು ಎಸ್‌ಐಟಿ ಬಂಧಿಸಿದೆ.
ಬುಧವಾರ (ಜೂನ್ 5) ರಾತ್ರಿಯೇ ಭವಾನಿ ರೇವಣ್ಣ ಅವರ ಕಾರು ಚಾಲಕನನ್ನು ಚಿಕ್ಕಮಗಳೂರಿನಲ್ಲಿ ಎಸ್‌ಐಟಿ ವಶಕ್ಕೆ ಪಡೆದಿತ್ತು. ಚಾಲಕ ಅಜಿತ್ ಚಿಕ್ಕಮಗಳೂರಿನ ಸಂಬಂಧಿಕರ ಮನೆಯಲ್ಲಿ ಇದ್ದ. ಈ ಮಾಹಿತಿ ಆಧರಿಸಿ ಚಿಕ್ಕಮಗಳೂರಿನಲ್ಲಿ ಎಸ್‌ಐಟಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಈ ಹಿಂದೆ ಅಜಿತ್ ಮಾವನ ಮನೆಯಲ್ಲಿ ಕೂಡ ಶೋಧ ನಡೆಸಿದ್ದರು.
ಸಂತ್ರಸ್ತೆಯ ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿರುವ ಆರೋಪ ಅಜಿತ್ ಮೇಲಿದೆ. ಸಂತ್ರಸ್ತೆಯನ್ನು ಮನೆಯಿಂದ ಕಾರಿನಲ್ಲಿ ಕರೆದೊಯ್ದ ಆರೋಪ ಕೂಡ ಇದೆ. ಭವಾನಿ ಸೂಚನೆ ಮೇರೆಗೆ ಅಜಿತ್ ಸಂತ್ರಸ್ತೆಯನ್ನು ಮನೆಯಿಂದ ಕರೆದೊಯ್ದ ಎನ್ನಲಾಗಿತ್ತು.
ಸಂತ್ರಸ್ತೆ ಅಪಹರಣದ ಬಗ್ಗೆ ಕೆ ಆರ್ ನಗರ ಠಾಣೆಯಲ್ಲಿ ಸಂತ್ರಸ್ತೆಯ ಮಗ ದೂರು ನೀಡಿದ್ದ. ಇದರ ಅನ್ವಯ ಭವಾನಿ ಕಾರು ಚಾಲಕ ಅಜಿತ್ ವಿರುದ್ಧ ಎಸ್‌ಐಟಿ, ಎಫ್ಐಆರ್ ದಾಖಲಿಸಿತ್ತು.