ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿಕೆ

ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

Update: 2024-07-05 11:15 GMT
ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ನೋಟೀಸ್ ನೀಡಿ, 2 ವಾರಗಳ ಕಾಲ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.

ಸರ್ಕಾರದ ಪರ ಎಸ್‌ಪಿಸಿ ಜಗದೀಶ್ ಹಾಜರಾಗಿದ್ದರು. ಪ್ರಜ್ವಲ್ ರೇವಣ್ಣ ಪರ ವಕೀಲರು, ವಿಚಾರಣೆ ತ್ವರಿತವಾಗಿ ನಡೆಸುವಂತೆ ಜಡ್ಜ್‌ಗೆ ಮನವಿ ಮಾಡಿದರು. ಇದಕ್ಕೆ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿ, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ ಎಂದು ಉತ್ತರಿಸಿ, 2 ವಾರಗಳ ಕಾಲ ವಿಚಾರಣೆ ಮುಂದೂಡಿದರು.

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.

ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ಸಲ್ಲಿಕೆಯಾಗಿವೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಸಂಬಂಧ ಪ್ರಜ್ವಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಸಂಬಂಧ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಹಾಗಾಗಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

Tags:    

Similar News