ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾಗೆ ಜಾಮೀನು
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್. ಫಾರ್ಮ್ಹೌಸ್ನಲ್ಲಿ ರೇವ್ ಪಾರ್ಟಿ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ತೆಲುಗು ನಟಿ ಹೇಮಾಗೆ ಜಾಮೀನು ಮಂಜೂರಾಗಿದೆ.;
By : The Federal
Update: 2024-06-13 13:24 GMT
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್. ಫಾರ್ಮ್ಹೌಸ್ನಲ್ಲಿ ರೇವ್ ಪಾರ್ಟಿ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ತೆಲುಗು ನಟಿ ಹೇಮಾಗೆ ಜಾಮೀನು ಮಂಜೂರಾಗಿದೆ.
ನಟಿ ಹೇಮಾ ಹೈದರಾಬಾದ್ನಿಂದ ಬೆಂಗಳೂರಿಗೆ ಬಂದು ರೇವ್ ಪಾರ್ಟಿ ಮಾಡಿದ್ದರು ಎಂಬ ಆರೋಪ ಇದೆ. ಈ ಪ್ರಕರಣದಲ್ಲಿ ಅವರನ್ನು ಜೂನ್ 14ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜಾಮೀನಿಗಾಗಿ ಅವರು ಅರ್ಜಿ ಸಲ್ಲಿಸಿದ್ದರು. ಇಂದು (ಜೂನ್ 12) ಹೇಮಾಗೆ ಜಾಮೀನು ಮಂಜೂರು ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಎನ್ಡಿಪಿಎಸ್ ವಿಶೇಷ ಕೋರ್ಟ್‌ನಿಂದ ನಟಿ ಹೇಮಾಗೆ ಜಾಮೀನು ನೀಡಲಾಗಿದೆ. ಹೇಮಾಳಿಂದ ಯಾವುದೇ ಮಾದಕವಸ್ತು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಾಡಿದ್ದಾರೆ. ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶಿಸಿದೆ.