ಇನ್ನು ಕೆಲವು ದಿನ ಹುಷಾರಾಗಿರಿ: ಜನರಿಗೆ ಮುನ್ನೆಚ್ಚರಿಕೆ ನೀಡಿದ ಆರೋಗ್ಯ ಇಲಾಖೆ
ಮುಂದಿನ ದಿನಗಳಲ್ಲಿ ಇದೇ ರೀತಿಯ ಗರಿಷ್ಠ ತಾಪಮಾನ ಇರಲಿದ್ದು, ತಾಪಮಾನ ಇಳಿಕೆಯವರೆಗೂ ಬೆಳಗ್ಗೆ 11 ರಿಂದ 4ರವರೆಗೂ ಹೆಚ್ಚು ಬಿಸಿಲಿಗೆ ಮೈ ಒಡ್ಡದಂತೆ ಆರೋಗ್ಯ ತಜ್ಞರು ಸೂಚಿಸಿದ್ದಾರೆ.;
By : The Federal
Update: 2024-03-28 13:58 GMT
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ತೀವ್ರ ಏರಿಕೆಯಾಗುತ್ತಿದ್ದು, ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕ್ರಮವಾಗಿ 40.6 ಮತ್ತು 40.2 ಡಿಗ್ರಿ ಸೆಲ್ಸಿಯಸ್ ತಾಪಮಾನ ವರದಿಯಾಗಿದೆ.
ಮುಂದಿನ ದಿನಗಳಲ್ಲಿ ಇದೇ ರೀತಿಯ ಗರಿಷ್ಠ ಬಿಸಿಲು ಇರಲಿದ್ದು, ತಾಪಮಾನ ಇಳಿಕೆಯವರೆಗೂ ಬೆಳಗ್ಗೆ 11 ರಿಂದ 4 ಗಂಟೆಯವರೆಗೂ ಹೆಚ್ಚು ಬಿಸಿಲಿಗೆ ಮೈ ಒಡ್ಡದಂತೆ ಆರೋಗ್ಯ ತಜ್ಞರು ಸೂಚಿಸಿದ್ದಾರೆ.
ತಾಪಮಾನ ಏರಿಕೆಯಿಂದ ಜನ ಹೈರಾಣುಗುತ್ತಿರುವಂತೆಯೇ, ರಾಜ್ಯ ಆರೋಗ್ಯ ಇಲಾಖೆಯು ಸಾರ್ವಜನಿಕರಿಗೆ ಸಲಹೆ ನೀಡಿ ಮಾರ್ಗಸೂಚಿ ಪ್ರಕಟಿಸಿದೆ.
ತನ್ನ ಅಧಿಕೃತ ʼಎಕ್ಸ್ʼ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಇಲಾಖೆ, ತಾಪಮಾದಿಂದ ರಕ್ಷಿಸಿಕೊಳ್ಳಲು ಹಲವು ಸಲಹೆ ನೀಡಿದೆ.
ಆರೋಗ್ಯ ಇಲಾಖೆಯ ಸಲಹೆಗಳು
- ಹೆಚ್ಚು ನೀರನ್ನು ಕುಡಿಯಿರಿ. ಮಜ್ಜಿಗೆ ಅಥವಾ ಎಳನೀರು, ಹಣ್ಣಿನ ರಸವನ್ನು ಹೆಚ್ಚಾಗಿ ಸೇವಿಸುವ ಮೂಲಕ ನಿರ್ಜಲೀಕರಣದ ಅಪಾಯದಿಂದ ರಕ್ಷಿಸಿಕೊಳ್ಳಿ.
- ಸಡಿಲವಾದ ತೆಳು ಬಣ್ಣದ ಹತ್ತಿಯ ಬಟ್ಟೆಯನ್ನು ಧರಿಸಿ, ಗಾಳಿಯಾಡುವ ಪಾದರಕ್ಷೆ ಧರಿಸಿ.
- ಹೊರಗಡೆ ತೆರಳುವ ವೇಳೆ ಕಣ್ಣಿಗೆ ಕಪ್ಪು ಕನ್ನಡಕ, ತಲೆ ಮೇಲೆ ಟವೆಲ್, ಛತ್ರಿ ಅಥವಾ ಸ್ಕಾರ್ಫ್ ಬಳಸುವ ಮೂಲಕ ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಿ.
- ರೇಡಿಯೊ, ದೂರದರ್ಶನ ಅಥವಾ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿಯನ್ನು ಪಡೆದು, ಅದರಂತೆ ದೈನಂದಿನ ಚಟುವಟಿಕೆಗಳನ್ನು ಯೋಜಿಸಿಕೊಳ್ಳಿ