ಮೆಟ್ರೋ ಕಾಮಗಾರಿ | ಆನೆಪಾಳ್ಯ ಜಂಕ್ಷನ್‌ ರಸ್ತೆ ಒಂದು ವರ್ಷ ಬಂದ್‌!

ಬನ್ನೇರುಘಟ್ಟ ಮುಖ್ಯರಸ್ತೆಯ MICO ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗಿನ ರಸ್ತೆಯನ್ನು ಏ.1ರಿಂದ ಒಂದು ವರ್ಷ ಕಾಲ ಮುಚ್ಚಲಾಗುತ್ತದೆ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆ ತಿಳಿಸಿದೆ;

Update: 2024-03-30 13:18 GMT
ನಮ್ಮ ಮೆಟ್ರೋ
Click the Play button to listen to article

‌ಮೆಟ್ರೋ ಕಾಮಗಾರಿಯ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆಯ ಮೈಕೊ (MICO) ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗಿನ ರಸ್ತೆಯನ್ನು ಏ.1ರಿಂದ ಒಂದು ವರ್ಷ ಕಾಲ ಮುಚ್ಚಲಾಗುತ್ತದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಏ.1ರಿಂದ ಒಂದು ವರ್ಷ ಕಾಲ ಬನ್ನೇರುಘಟ್ಟ ಮುಖ್ಯರಸ್ತೆಯ ಮೈಕೊ(MICO) ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗಿನ ರಸ್ತೆಯನ್ನು ಮುಚ್ಚಲಾಗುತ್ತದೆ.

ಈ ಹಿನ್ನಲೆಯಲ್ಲಿ ಬನ್ನೇರುಘಟ್ಟ ಮುಖ್ಯರಸ್ತೆಯ ಡೈರಿ ಸರ್ಕಲ್‌ ಕಡೆಯಿಂದ ಆನೆಪಾಳ್ಯ ಜಂಕ್ಷನ್‌ ಕಡೆಗೆ ಚಲಿಸಬೇಕಾದ ವಾಹನಗಳು ಮೈಕೋ ಸಿಗ್ನಲ್‌ನಲ್ಲಿ ಬಲಕ್ಕೆ ತಿರುಗಿ ಬಾಷ್ ಲಿಂಕ್‌ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್‌ ತಲುಪಿ ಎಡಕ್ಕೆ ತಿರುಗಿ ಚಲಿಸಬೇಕು. ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ಸರ್ಕಲ್‌ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಡೈರಿ ಸರ್ಕಲ್‌ನಿಂದ ಶಾಂತಿನಗರ ಕಡೆಗೆ ಚಲಿಸುವ ವಾಹನಗಳು ವಿಲ್ಸನ್‌ ಗಾರ್ಡನ್‌ನ 7 ನೇ ಮುಖ್ಯ ರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳಬೇಕು‌ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆ ತಿಳಿಸಿದೆ.

Tags:    

Similar News